ಸುರಪುರ:ಇನ್ನೆನು ಕೆಲವೇ ದಿನಗಳಲ್ಲಿ ಮುಂಗಾರು ಬಿತ್ತನೆ ಆರಂಭಗೊಳ್ಳಲಿದ್ದು ಸರಕಾರ ಕೂಡಲೇ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಸಬ್ಸಿಡಿ ದರದಲ್ಲಿ ಬೀಜ ಗೊಬ್ಬರಗಳ ವಿತರಣೆಯನ್ನು ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಹಣಮಂತರಾಯ ಮಡಿವಾಳ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆಯನ್ನು ನೀಡಿರುವ ಅವರು,ಈಗಾಗಲೇ ರೈತರು ಮುಂಗಾರು ಹಂಗಾಮಿಗಾಗಿ ಭೂಮಿಯನ್ನು ಹದಗೊಳಿಸಿಕೊಂಡು ಮಳೆಗಾಗಿ ಕಾಯುತ್ತಿದ್ದಾರೆ,ಜೂನ್ 7 ರಿಂದ ಮಳೆಗಾಲ ಆರಂಭಗೊಳ್ಳುವ ಸಾಧ್ಯತೆಯೂ ಇದೆ,ಆದರೆ ಸರಕಾರ ಇದುವರೆಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಸಬ್ಸಿಡಿ ದರದಲ್ಲಿ ರೈತರಿಗೆ ವಿತರಿಸಲು ಯಾವುದೇ ಬೀಜ ಗೊಬ್ಬರಗಳ ದಾಸ್ತಾನು ಮಾಡಿಲ್ಲ,ಹಿಂದಿನ ಸರಕಾರ ರೈತರಿಗೆ ನೀಡಬೇಕಿದ್ದ ಅನೇಕ ಸೌಲಭ್ಯಗಳನ್ನು ನಿಲ್ಲಿಸಿ ರೈತರಿಗೆ ತೊಂದರೆ ಮಾಡಿದೆ ಆದರೆ ಈಗ ಹೊಸ ಸರಕಾರ ಬಂದಿದ್ದು ಈ ಸರಕಾರದ ಬಗ್ಗೆ ರೈತರಿಗೆ ತುಂಬಾ ನಿರೀಕ್ಷೆ ಇದೆ ಅದನ್ನು ಹುಸಿಗೊಳಿಸದಂತೆ ರೈತರಿಗೆ ಬೇಕಾದ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಕೊನೆ ಭಾಗದ ರೈತರಿಗೆ ಸರಿಯಾಗಿ ಕಾಲುವೆಗಳ ನೀರು ತಲಪುವುದಿಲ್ಲ,ಆದ್ದರಿಂದ ಮಳೆಗಳನ್ನೆ ಹೆಚ್ಚು ಅವಲಂಭಿಸುವ ಸ್ಥಿತಿ ಇದೆ,ಆದ್ದರಿಂದ ಆದಷ್ಟು ಬೇಗನೆ ಸಬ್ಸಿಡಿ ಬೀಜ ಗೊಬ್ಬರ ವಿತರಿಸಿದರೆ ಮಳೆ ಆರಂಭವಾದ ಕೂಡಲೇ ರೈತರಿಗೆ ಬಿತ್ತಣಿಕೆಗೆ ಅನುಕೂಲವಾಗಲಿದೆ ಎಂದು ಸರಕಾರಕ್ಕೆ ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಮುಖಂಡ ಸಾಹೇಬಗೌಡ ಪೊಲೀಸ್ ಪಾಟೀಲ್ ಸೇರಿದಂತೆ ಇತರರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…