ಕಲಬುರಗಿ: ಗಾಣಿಗ ಸಮಾಜದ ಹಿರಿಯ ನಾಯಕ ಸತತ ನಾಲ್ಕು ಬಾರಿ ಶಾಸಕರಾಗಿರುವ ಭದ್ರಾವತಿಯ ಸಂಗಮೇಶ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಗಾಣಿಗ ಸಮಾಜದ ಅಗ್ರಗಣ್ಯ ನಾಯಕ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಪರಿಗಣಿಸದಿರುವುದನ್ನು ಗುಲ್ಬರ್ಗ ಡಿಸ್ಟ್ರಿಕ್ಟ್ ಹಿಂದೂ ಗಾಣಿಗ ಸಮಾಜ ತೀವ್ರವಾಗಿ ಖಂಡಿಸಿದೆ.
ರಾಜ್ಯದಲ್ಲಿ ಸುಮಾರು 65 ಲಕ್ಷ ಜನಸಂಖ್ಯೆ ಹೊಂದಿರುವ ಸಮಾಜವನ್ನು ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಪರಿಗಣಿಸದಿರುವುದು ಅಪಾರ ನೋವುಂಟು ಮಾಡಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಶರಣು ಬಿಲ್ಲಾಡ ಹಾಗೂ ಕಾರ್ಯದರ್ಶಿ ಈಶ್ವರಗೌಡ ಪಾಟೀಲ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಮಾನಗಳಲ್ಲಿ ಸರ್ಕಾರದಲ್ಲಿ ಇವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.
ಈಗಾಗಲೇ ಘೋಷಣೆ ಮಾಡಿರುವಂತೆ ಗಾಣಿಗ ಸಮಾಜಕ್ಕೆ ಐದು ವರ್ಷದಲ್ಲಿ 2500 ಕೋಟಿ ರೂ. ಅನುದಾನ ಒದಗಿಸುವ ಮೂಲಕ ಸಮಾಜದ ಸವಾರ್ಂಗೀಣ ಅಭಿವೃದ್ಧಿಗೆ ಕಾರಣರಾಗಬೇಕು ಎಂದು ಮನವಿ ಮಾಡಿದರು.
ಸುರೇಶ ನೇದಲಗಿ, ಬಸವರಾಜಗೌಡ ಪಾಟೀಲ ಕುಕನೂರ, ಮಹಾಂತೇಶ ಕೊನ್ನೂರ, ನಿಂಗನೌಡ ಪಾಟೀಲ ಇತರರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…