ಕಲಬುರಗಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಇದೇ ಜೂನ್ 25 ರಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಕಲಬುರಗಿ- ಯಾದಗಿರಿ ಜಿಲ್ಲೆಯ ಶಾಸಕರುಗಳಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಅಖಿಲ ಭಾರತ ವೀರಶೈವ- ಲಿಂಗಾಯತ ಸಮಾಜದ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು.
ಅರ್ಥಪೂರ್ಣ ಅಭಿನಂದನೆ ನೆರವೇರಿಸಲು ಹಾಗೂ ಸಮಾಜದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಚರ್ಚಿಸಲು ರೂಪು ರೇμÉ ಹಾಕಲಾಗುತ್ತಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಸಕ್ತವಾಗಿ 55 ಶಾಸಕರು ವೀರಶೈವ ಲಿಂಗಾಯತ ಸಮಾಜದಿಂದ ಆಯ್ಕೆಯಾಗಿದ್ದು, ಬರುವ ಅಧಿವೇಶನದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸಮಾಜದ ವತಿಯಿಂದ ಸನ್ಮಾನಿಸಲು ಉದ್ದೇಶಿಸಲಾಗಿದೆ. ಅದರಕ್ಕಿಂತ ಮುಂಚಿತವಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಭಾಗದಲ್ಲಿ ಸನ್ಮಾನಿಸುವ ಅಂಗವಾಗಿ ಕಲಬುರಗಿಯಲ್ಲಿ ಜೂ. 25 ರಂದು ವೀರಶೈವ ಲಿಂಗಾಯತ ಶಾಸಕರನ್ನು ಸನ್ಮಾನಿಸುವ ಸಮಾರಂಭ ಆಯೋಜಿಸಲಾಗಿದೆ ಎಂದರು.
ಕಲಬುರಗಿ-ಯಾದಗಿರಿ ಜಿಲ್ಲೆಯಿಂದ ಆಯ್ಕೆಯಾದ ಶಾಸಕರಿಗೆ ಅಭಿನಂದನಾ ಸಮಾರಂಭವನ್ನು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ವಯೋವೃದ್ದರ ಬದಲಿಗೆ ಕ್ರಿಯಾಶೀಲ, ಸಮಾಜಮುಖಿ ಶಾಸಕರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಅವರು ಆಗ್ರಹಿಸಿದರು.
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 5 ವರ್ಷದ ಅವಧಿಯಲ್ಲಿ 2500 ಕೋಟಿ ರೂ. ಅನುದಾನ ನೀಡುವ ಮೂಲಕ ಸಮಾಜದ ಸವಾರ್ಂಗೀಣ ಅಭಿವೃದ್ಧಿಗೆ ಅನುಕೂಲ ಕಲ್ಪಿಸಿಕೊಡಬೇಕು. ಉತ್ತರ ಕರ್ನಾಟಕದವರಿಗೆ ಹೆಚ್ಚಿನ ಮಟ್ಟದಲ್ಲಿ ನಿರ್ದೇಶಕರನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದರು.
ಡಾ. ಸುಧಾ ಹಾಲಕಾಯಿ, ಶರಣು ಟೆಂಗಳಿ, ಡಾ.ನಾಗವೇಣಿ ಪಾಟೀಲ ರೇವೂರ, ಜ್ಯೋತಿ ಮರಗೋಳ, ಎಂ.ಎಸ್. ಪಾಟೀಲ ನರಿಬೋಳ, ನಾಗಲಿಂಗಯ್ಯ ಮಠಪತಿ, ಗೌರಿ ಚಿತಕೋಟೆ, ಶಂಭು ಪಾಟೀಲ ಇತರರಿದ್ದರು.
ಉತ್ತರ ಕರ್ನಾಟಕ ಭಾಗದ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿನಿಯರ ವಸತಿ ನಿಲಯ ಜುಲೈ 2ನೇ ವಾರದಲ್ಲಿ ಲೋಕಾರ್ಪಣೆಯಾಗಲಿದೆ. ಈ ಕಾರ್ಯಕ್ರಮವನ್ನು ಐತಿಹಾಸಿಕ ಕಾರ್ಯಕ್ರಮವನ್ನಾಗಿ ಮಾಡಲು ಈಗಾಗಲೇ ಯೋಜನೆ ರೂಪಿಸಲಾಗಿದೆ. – ಶರಣಕುಮಾರ ಮೋದಿ, ಅಧ್ಯಕ್ಷರು, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ, ಕಲಬುರಗಿ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…