ಸುರಪುರ: ತಾಲೂಕಿನ ವಿವಿಧೆಡೆಗಳಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಗಿದೆ.ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ,ತಾಲೂಕು ನ್ಯಾಯವಾದಿಗಳ ಸಂಘ ಹಾಗೂ ಅರಣ್ಯ ಇಲಾಖೆ ಇವರುಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಸಸಿ ನೆಟ್ಟು ನೀರೆರೆಯುವ ಮೂಲಕ ಚಾಲನೆ ನೀಡಿದ ಹಿರಿಯ ದಿವಾಣಿ ನ್ಯಾಯಾಧೀಶ ಮಲ್ಲಿಕಾರ್ಜುನ ಈಶ್ವರಪ್ಪ ಕಮತಗಿಯವರು ಮಾತನಾಡಿ,ಪ್ರತಿಯೊಬ್ಬ ಮನುಷ್ಯನಿಗೆ ಬದುಕಲು ಉಸಿರು ಎಷ್ಟು ಮುಖ್ಯವೋ ಪರಿಸರವೂ ಅಷ್ಟೆ ಮುಖ್ಯವಾಗಿದೆ,ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಮಾರುತಿ.ಕೆ,ಬಸವರಾಜ, ನ್ಯಾಯವಾದಿಗಳ ಸಂಘದ ತಾಲೂಕು ಅಧ್ಯಕ್ಷ ನಂದಪ್ಪ ಜೆ ಬಾಕ್ಲಿ,ವಲಯ ಅರಣ್ಯಾಧಿಕಾರಿ ಮೌಲಾಲಿ ಸೇರಿದಂತೆ ಇನ್ನೂ ಅನೇಕ ಜನ ವಕೀಲರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ನಗರಸಭೆ: ಇಲ್ಲಿಯ ನಗರಸಭೆ ವತಿಯಿಂದ ನಗರದ ತಿಮ್ಮಾಪುರದಲ್ಲಿನ ಉದ್ಯಾನವನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಸಸಿ ನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ನಗರಸಭೆ ಪೌರಾಯುಕ್ತ ಪ್ರೇಮ್ ಚಾಲ್ರ್ಸ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮುಖಂಡ ಸಿದ್ರಾಮ ಎಲಿಗಾರ,ಆರೋಗ್ಯ ನಿರೀಕ್ಷಕ ಗುರುಸ್ವಾಮಿ,ಶಿವಪುತ್ರ,ಸೂಪರವೈಸರ್‍ಗಳಾದ ಶಬ್ಬಿರ್,ಶರಣಪ್ಪ ಹಾಗೂ ದುರ್ಗಪ್ಪ ರಾಘವೇಂದ್ರ,ಶಂಕರ ಸೇರಿದಂತೆ ಅನೇಕರಿದ್ದರು.
ದೇವರಗೋನಾಲ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ಸಾಮಾಜಿಕ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಕಚೇರಿ ಸುರಪುರ,ರಾಷ್ಟ್ರೀಯ ಸೇವಾ ಯೋಜನೆ ಸರಕಾರಿ ಪ್ರೌಢಶಾಲೆ ದೇವರಗೋನಾಲ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಕಾರ್ಯಕ್ರಮವನ್ನು ತಾಲೂಕು ಪಂಚಾಯತಿ ಇಓ ಚಂದ್ರಶೇಖರ ಪವರ್ ಉದ್ಘಾಟಿಸಿದರು,ಗ್ರಾ.ಪಂ ಅಧ್ಯಕ್ಷೆ ಮಾನಮ್ಮ ಅಧ್ಯಕ್ಷತೆ ವಹಿಸಿದ್ದರು.ಎಸ್.ಡಿ.ಎಮ್.ಸಿ ಅಧ್ಯಕ್ಷ ಸಣ್ಣ ದೇಸಾಯಿ,ಮಾಜಿ ಗ್ರಾ.ಪಂ ಅಧ್ಯಕ್ಷ ಭೀಮಣ್ಣ ದೀವಳಗುಡ್ಡ,ಪ್ರೌಢಶಾಲೆ ಮುಖ್ಯಗುರು ಎಚ್.ಎಲ್ ಕಡೇಮನಿ,ಅರಣ್ಯಾಧಿಕಾರಿ ಮೌಲಾಲಿ ಅಷ್ಟಗಿ,ಸಾಮಾಜಿಕ ವಲಯ ಅರಣ್ಯಾಧಿಕಾರಿ ಸುನೀಲ ರಾಠೋಡ,ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಮಾಲಿ ಪಾಟೀಲ್,ಮುSಂಡರಾದ ನಿಂಗಯ್ಯ ಬೈರಿಮಡ್ಡಿ,ನಬಿಲಾಲ,ನಿಂಗಣ್ಣ ಬಾಡ,ಹಣಮಂತ್ರಾಯಗೌಡ ಮಾಲಿ ಪಾಟೀಲ,ನಿವೃತ್ತ ಶಿಕ್ಷಕ ಬಸವಂತ್ರಾಯ,ದೈಹಿಕ ಶಿಕ್ಷಕ ಭೀಮರಾಯ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ರುಕ್ಮಾಪುರ: ತಾಲೂಕಿನ ರುಕ್ಮಾಪುರ ಗ್ರಾಮದ ನಿಸರ್ಗಧಾಮ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ದೇವರದಾಸಿಮಯ್ಯ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಖಾಸ್ಗತೇಶ್ವರ ನೃತ್ಯ ಕಲಾ ಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಸಲಾಯಿತು.ಮುಖಂಡರಾದ ಸುರೇಶ ಚಟ್ಟಿ,ಅನೀಲ ಜಿ.ಕೆ,ಆದಯ್ಯ ಹೊನ್ನಳ್ಳಿ,ಅಮರೇಶ ಓದಾ,ಶರಣು ಗೋಗಿ,ಅಂಬ್ರೇಶ ಚಿಲ್ಲಾಳ,ಶ್ರೀನಿವಾಸ ಸುರಪುರ, ಹಣಮಂತ್ರಾಯಗೌಡ, ಬಲರಾಮ ಠಾಣಾಗುಂದಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ ; ಗ್ರಾಮೀಣಾಭಿವೃದ್ಧಿ ಪಂಚಾಯತ, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ಬುದ್ಧ ವಿಹಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಕಲಬುರಗಿ ಜಿಲ್ಲಾ…
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿಎ. ನಾರಾಯಣಗೌಡ ರವರ ಆದೇಶದ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಆನಂದ ದೊಡ್ಡಮನಿ ಹಾಗೂ…
ಶಹಾಬಾದ: ನಗರಸಭೆ ವಾರ್ಡ ನಂ. 3 ರ ಉಪಚುನಾವಣೆ ಪ್ರಯುಕ್ತ ಗುರುವಾರ ಬೆಳಿಗ್ಗೆ ಕಲಬುರಗಿ ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮಡು…
ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…