ಬಿಸಿ ಬಿಸಿ ಸುದ್ದಿ

ಕಲಬುರಗಿಗೆ ಉಪ ರಾಜಧಾನಿ ಘೋಷಣೆ, ಸಚಿವ ಖರ್ಗೆ ಉಸ್ತುವಾರಿ ನೀಡುವಂತೆ ಒತ್ತಾಯ

ಕಲಬುರಗಿ: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಕಲಬುರಗಿ ಉಪ ರಾಜಧಾನಿ ಮಾಡುವಂತೆ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಜಿಲ್ಲಾ ಉಸ್ತುವಾರಿ ವಹಿಸಿ ಮತ್ತು ಇನ್ನೋರ್ವ ಸಚಿವ ಶರಣಪ್ರಕಾಶ ಪಾಟೀಲರನ್ನು ಕೆಕೆಆರ್ ಡಿಬಿ ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಲ್ಯಾಣ ಭಾಗದ ಅಭಿವೃದ್ಧಿಗೆ ಪೂರಕವಾದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ಹಿಂದೆ ಶರಣಪ್ರಕಾಶ ಪಾಟೀಲ ಅವರು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ಅನುಭವವಿದೆ.ಅನೇಕ ಯೋಜನೆಗಳನ್ನು ಕೈಗೊಂಡಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೆಕೆಆರ್ ಡಿಬಿಗೆ 5 ಸಾವಿರ ಕೋಟಿ ರೂಪಾಯಿ ಅನುದಾನ ನೀಡುವ ಕುರಿತು ಭರವಸೆ ನೀಡಲಾಗಿದೆ.

ಸಚಿವ ಶರಣಪ್ರಕಾಶ ಪಾಟೀಲ ಅವರು ಅಧ್ಯಕ್ಷರಾದರೆ ಅನುದಾನ ಪ್ರಾಮಾಣಿಕವಾಗಿ ಸದ್ಭಳಕೆಯಾಗಿ ಈ ಭಾಗ ಅಭಿವೃದ್ಧಿ ಹೊಂದುತ್ತದೆ ಎಂದ ಅವರು ಜಿಲ್ಲೆಯ ಯುವ ಸಚಿವರಾದ ಪ್ರಿಯಾಂಕ ಖರ್ಗೆ ಅವರಿಗೆ ಜಿಲ್ಲಾ ಉಸ್ತುವಾರಿ ಹೊಣೆ ನೀಡಬೇಕು.ಅದರಂತೆ ಪ್ರೀಯಾಂಕ ಖರ್ಗೆ ಅವರು ಕಾಳಜಿ ವಹಿಸಿ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಕಲಬುರಗಿ ಉಪ ರಾಜಧಾನಿ ಮಾಡಿದರೆ ಕಚೇರಿಯ ಕೆಲಸಕ್ಕಾಗಿ ಈ ಭಾಗದ ಜನರು ದೂರದ ಬೆಂಗಳೂರಿಗೆ ತೆರಳಲು ತಪ್ಪುತ್ತದೆ.ಇದರಿಂದ ಸಮಯವೂ ಹಾಗೂ ಹಣ ಉಳಿತಾಯವಾಗುತ್ತದೆ.ಅಲ್ಲದೆ ರಾಜಧಾನಿಯಾದರೆ ಕಲಬುರ್ಗಿಯಲ್ಲಿ ಉಪ ಕಚೇರಿಗಳು ಸ್ಥಾಪನೆಯಾಗುತ್ತವೆ. ಇದರಿಂದ ಇಲ್ಲಿಯ ಜನರಿಗೆ ಅನುಕೂಲವಾಗುತ್ತದೆ.371ನೇ ಜೆ ಕಲಂ ಅನುಷ್ಠಾನಕ್ಕೆ ಕಲಬುರಗಿಯಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…

6 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

13 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

13 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

15 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

15 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

15 hours ago