ಬೆಂಗಳೂರು: ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪೀಕರ್ ಯು.ಟಿ.ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ಧ ಮಾತುಕತೆ ನಡೆಸಿದರು.
ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟ್ರÀ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.
ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಸ್ಪೀಕರ್ ಹುದ್ದೆಯಲ್ಲಿ ನಿಮಗೆ ಸಿಗುವ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಅನುಭವ, ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಅವರು ಸಲಹೆ ನೀಡಿದರು.
ಸಭಾಧ್ಯಕ್ಷರಾಗಿ ಕಾರ್ಯಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯದ ಜನರ ಸಂಸ್ಕøತಿ, ಆಚಾರ ವಿಚಾರದ ಬಗ್ಗೆ ನನಗೆ ಅಪಾರ ಗೌರವವಿದ್ದು, ಶಾಸನ ಸಭೆಯ ನಡವಳಿಕೆಯ ಯಾವುದೇ ಮಾರ್ಗದರ್ಶನಕ್ಕಾಗಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…