ಮಕ್ಕಳನ್ನು ಕಡ್ಡಾಯವಾಗಿ ಸರಕಾರಿ ಶಾಲೆಗೆ ಸೇರಿಸಿ: ಸಾಬೇರಾ ಬೇಗಂ

0
90

ಶಹಾಬಾದ: ನಗರದ ಗ್ರಾಮೀಣ ಮತಕ್ಷೇತ್ರದ ಶಾಸಕರ ಸರ್ಕಾರಿ ಕನ್ಯಾ ಮಾದರಿಯ ಪ್ರಾಥಮಿಕ ಶಾಲೆಯ (ಜಿಪಿಎಸ್) ವತಿಯಿಂದ ದಾಖಲಾತಿ ಆಂದೋಲನ ಕಾರ್ಯಕ್ರಮ ನಡೆಯಿತು.

ಮಕ್ಕಳ ರಕ್ಷಣೆ, ಶಿಕ್ಷಣ ಬಲವರ್ಧನೆ ನಮ್ಮೆಲ್ಲರ ಹೊಣೆ, ‘ರಾಷ್ಟ್ರದ ಬುನಾದಿಗೆ ಪ್ರಾಥಮಿಕ ಶಿಕ್ಷಣ’ ಎಂಬ ನಾಮಪಲಕಗಳೊಂದಿಗೆ ನಗರದ ಮುಖ್ಯ ರಸ್ತೆ ಮತ್ತು ಬೀದಿಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು, ಮೆರವಣಿಗೆ ಜಾಥಾ ನಡೆಸಿದರು.

Contact Your\'s Advertisement; 9902492681

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಗರಸಭೆಯ ಸದಸ್ಯೆ ಸಾಬೇರಾ ಬೇಗಂ , ಪ್ರಸ್ತುತ ಸಾಲಿನ ಶಾಲಾ ದಾಖಲಾತಿಗಳು ಪ್ರಾರಂಭವಾಗಿದ್ದು, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ ಎಂದು ಅವರು ತಿಳಿಸಿದರು.
ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಕರನ್ನು ಹೊಂದಿದ್ದು, ಮಕ್ಕಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಒದಗಿಸುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಪೆÇೀಷಕರ ಪಾತ್ರ ಬಹುಮುಖ್ಯವಾದದ್ದು ಎಂದರು.

ಮುಖ್ಯಗುರು ಸಂತೋಷ ಸಲಗರ್ ಮಾತನಾಡಿ, ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ ಎಂಬ ರೀತಿಯಲ್ಲಿ ಶಿಕ್ಷಣ ಒದಗಿಸುವ ಜವಾಬ್ದಾರಿ ನಮ್ಮದು. ಆದ್ದರಿಂದ ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಎಂದು ಪೆÇೀಷಕರಲ್ಲಿ ಮನವಿ ಮಾಡಿ‘ಮಕ್ಕಳಿಗೆ ಆಸ್ತಿ ಮಾಡಬೇಡಿ, ಮಕ್ಕಳನ್ನೇ ಆಸ್ತಿ ಮಾಡಿ, ಪ್ರತಿಯೊಂದಕ್ಕೂ ಸರ್ಕಾರಿ ನೌಕರಿ ಬೇಕು ಎಂದು ಹೇಳುತ್ತೀರಿ, ಏಕೆ ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತೀರಿ’ ಎಂದು ಹೇಳಿದರು.
ನಗರಸಭೆಯ ಸದಸ್ಯ ಸೂರ್ಯಕಾಂತ ಕೋಬಾಳ ಮಾತನಾಡಿ, ಆರು ವರ್ಷದ ಮೇಲ್ಪಟ್ಟ ಹೆಣ್ಣಿರಲಿ, ಗಂಡಿರಲಿ ತಪ್ಪದೇ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ನೋಂದಾಯಿಸಿ ಮಕ್ಕಳ ಶಿಕ್ಷಣ ಕಲಿಕೆಗೆ ಸಹಕರಿಸಬೇಕು.

ಶಾಲಾ ಮಕ್ಕಳಿಗಾಗಿ ಉಚಿತ ಸಮವಸ್ತ್ರ, ಹಾಲು, ಪುಸ್ತಕ, ಬಿಸಿಯೂಟ, ಶೂಭಾಗ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು’ ಎಂದು ಹೇಳಿದರು.

ಅಂಜನಾ ದೇಶಪಾಂಡೆ, ಅಮಿನೋದ್ದಿನ್, ಚಂದ್ರಲೇಖಾ,ಈರಮ್ಮ ಕಂಬಾನೂರ,ಭಾಗ್ಯಲತಾ, ಭಾರತಿ,ಸಂಪತ್ತಕುಮಾರಿ,ಸುವರ್ಣಾ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here