ಅಫಜಲಪುರ : ಪಟ್ಟಣದ ಕಲಬುರಗಿ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ಅವಮಾನ ಮಾಡಿರುವದು ದುರದಷ್ಠಕರ ಸಂಗತಿ ಅವಮಾನ ಮಾಡಿದ ಕಿಡಿಗೇಡಿಗಳನ್ನು ಶೀರ್ಘ ದಲ್ಲಿ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕುರುಬ ಸಮಾಜದ ಮುಖಂಡ ಜೆ.ಎಂ ಕೊರಬು ಅವರು ಸರಕಾರಕ್ಕೆ ಒತ್ತಾಯಿಸಿದರು.
ಪಟ್ಟಣದ ಬಸವೇಶ್ವರ ವೃತ್ತದಿಂದ ತಹಶೀಲ್ ಕಚೇರಿವರೆಗೆ ಕುರುಬ ಸಮಾಜದವರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಂತರ ಮಾತನಾಡಿದ ಜೆ.ಎಂ ಕೊರಬು ಇಂತಹ ಕೃತ್ಯಗಳು ನಡೆಯುವದರಿಂದ ಸಮಾಜದಲ್ಲಿ ಅಶಾಂತಿ ಮೂಡುತ್ತಿದೆ.ಇದು ರಾಯಣ್ಣನಿಗೆ ಮಾಡಿದ ಅವಮಾನವಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನವಾಗಿದೆ.ಇಂತಹ ಹೀನ ಕೃತ್ಯ ಗಳು ಯಾವತ್ತೂ ನಡೆಯಬಾರದು .ಅವಮಾನ ಮಾಡಿದವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ನಂತರ ತಹಶಿಲ್ದಾರರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಯುವ ಮುಖಂಡ ಭೀರಣ್ಣ ಕಲ್ಲೂರ, ರಮೇಶ ನೀಲಗಾರ, ಕೆ.ಜಿ ಪೂಜಾರಿ, ವಿಠಲ್ ಜಗಲಗೊಂಡ, ಸಾವಿರಪ್ಪ ಪೂಜಾರಿ, ಕನಕ ಟೇಲರ್, ಮಾಳಪ್ಪ ಪೂಜಾರಿ, ಯಲ್ಲಾಲಿಂಗ ಕೆ ಪೂಜಾರಿˌ ರಾಜು ಆರೇಕರ್, ರವಿ ಗೌರ್, ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…