ಬಿಸಿ ಬಿಸಿ ಸುದ್ದಿ

ಜ್ಞಾನ ಸಂಭ್ರಮ ವಿಶೇಷ ಕಾರ್ಯಕ್ರಮದಲ್ಲಿ ಪುಸ್ತಕ ವಿತರಣೆ

ಆಳಂದ: ಇತ್ತೀಚಿಗೆ ಅನೇಕ ಸಭೆ-ಕಾರ್ಯಕ್ರಮಗಳಲ್ಲಿ ದುಂದು ವೆಚ್ಚ ಹೆಚ್ಚಾಗುತ್ತಿದೆ. ಬೇರೆ ವಸ್ತುಗಳನ್ನು ಕಾಣಿಗೆಯಾಗಿ ನೀಡುವ ಬದಲು ಉತ್ತಮ ಗ್ರಂಥಗಳನ್ನು ನೀಡಬೇಕು. ವ್ಯಕ್ತಿಯ ಜೀವನದ ದಿಕ್ಕನ್ನೇ ಬದಲಿಸುವ ಶಕ್ತಿ ಪುಸ್ತಕಗಳಿಗಿದ್ದು, ಸಾಧನೆಯ ದಾರಿಯನ್ನು ತಿಳಿಸುವ ಮೂಲಕ ಶ್ರೇಷ್ಠ ವ್ಯಕ್ತಿತ್ವ ನಿರ್ಮಾಣ ಮಾಡುತ್ತವೆ ಎಂದು ಕೆಎಚ್‍ಬಿ ಗ್ರೀನ್ ಪಾರ್ಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ ಹೇಳಿದರು.

ತಾಲೂಕಿನ ಗುಂಜ ಬಬಲಾದ ಗ್ರಾಮದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಏರ್ಪಡಿಸಲಾಗಿದ್ದ ‘ಜ್ಞಾನ ಸಂಭ್ರಮ’ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜ್ಞಾನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಂಗಮೇಶ್ವರ ಸರಡಗಿ, ನ್ಯಾಯವಾದಿ ಹಣಮಂತರಾಯ ಎಸ್.ಅಟ್ಟೂರ್ ಮಾತನಾಡಿ, ಬಸವೇಶ್ವರ ಸಮಾಜ ಸೇವಾ ಬಳದ ಎಚ್.ಬಿ.ಪಾಟೀಲ ಅವರ ಮದುವೆ ವಾರ್ಷಿಕೋತ್ಸವ ಮತ್ತು ಪುತ್ರನ ಜನ್ಮದಿನಾಚರಣೆ ಪ್ರಯುಕ್ತ ಆಗಮಿಸಿದ್ದ ಎಲ್ಲರಿಗೆ ಶರಣರು, ಸಂತರು, ಮಹನೀಯರು, ಸ್ವಾತಂತ್ರ್ಯ ಹೋರಾಟಗಾರರು, ಆರೋಗ್ಯ, ಪರಿಸರ ಸೇರಿದಂತೆ ಅನೇಕ ಮಹತ್ವದ ಪುಸ್ತಕಗಳನ್ನು ಉಚಿತವಾಗಿ ನೀಡುವ ಮೂಲಕ ಓದುವ ಅಭಿರುಚಿ ಬೆಳೆಸಬೇಕು ಎಂಬ ಅವರ ಕಳಕಳಿ ಇತರರಿಗೆ ಮಾದರಿಯಾಗಿದೆ ಎಂದರು.

ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ. ಸುನೀಲಕುಮಾರ ಎಚ್.ವಂಟಿ, ಕ.ರಾ.ಪ್ರಾ.ಶಾ.ಶಿ.ಸಂಘದ ಜಿಲ್ಲಾ ಉಪಾಧ್ಯಕ್ಷ ನೀಲಕಂಠಯ್ಯ ಹಿರೇಮಠ, ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಯಶ್ರೀ ಎಚ್.ಬಿ.ಪಾಟೀಲ ಬಸವಭುವನ ಎಚ್. ಪಾಟೀಲ ಎಚ್.ಬಿ.ಪಾಟೀಲ, ಬಸವಶ್ರೀ, ವೀರಣ್ಣ ಲೊಡ್ಡೇನ್, ಶಿವಯೋಗಪ್ಪ ಬಿರಾದಾರ, ಪರಮೇಶ್ವರ ಬಿ.ದೇಸಾಯಿ, ದೇವೇಂದ್ರಪ್ಪ್ ಗಣಮುಖಿ, ಚಂದ್ರಕಾಂತ ಬಿರಾದಾರ, ಕೆ.ಬಸವರಾಜ, ಸೂರ್ಯಕಾಂತ ಸಾವಳಗಿ, ಬಾಲಕೃಷ್ಣ ಕುಲಕರ್ಣಿ, ಬಸವರಾಜ ಹೆಳವರ ಯಾಳಗಿ ಅನೇಕರು ಭಾಗವಹಿಸಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago