ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಾರಿಗೊಳಿಸಲಾಗುತ್ತಿದ್ದು, ಇಂತಹ ಬೃಹತ್ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಆ ಇಲಾಖೆಗಿರುವ ಇತಿ-ಮಿತಿಗಳನ್ನು ಗಮನಿಸಿ ಕಂದಾಯ ಇಲಾಖೆಯ ಸಹಕಾರದೊಂದಿಗೆ ಜಾರಿಗೊಳಿಸಲು ಯೋಜಿಸಿದ್ದು, ಇಂದು ಈ ಕುರಿತಂತೆ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ಇಂದು ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಅತ್ಯಂತ ದೊಡ್ಡ ಪಿಂಚಣಿ ಯೋಜನೆಯಾಗಿದ್ದು, ಮಹಿಳಾ ಮತ್ತು ಮಕ್ಕಳ ಇಲಾಖೆ ಅಷ್ಟೊಂದು ಅಧಿಕಾರಿ/ಸಿಬ್ಬಂದಿಗಳನ್ನು ಹೊಂದಿರದ ಕಾರಣಕ್ಕೆ ಕಂದಾಯ ಇಲಾಖೆ ವತಿಯಿಂದ ಸಹಕಾರ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಕಂದಾಯ ಇಲಾಖೆ ಅಡಿ ಬರುವ ಪಿಂಚಣಿಗಳ ಹಿರಿಯ ಅಧಿಕಾರಿಗಳೊಂದಿಗೆ ಇಂದು ಸಭೆ ಮಾಡಿದ್ದೇನೆ, ರಾಜ್ಯದಲ್ಲಿ ಈಗಾಗಲೇ ಸುಮಾರು 78 ಲಕ್ಷ ಜನ ವಿವಿಧ ರೀತಿಯ ಪಿಂಚಣಿ ಫಲಾನುಭವಿಗಳಿದ್ದಾರೆ. ವಿಧವೆಯರು, ಅಂಗವಿಕಲರು, ತೃತಿಯ ಲಿಂಗಿಗಳು ಸೇರಿದಂತೆ ಸುಮಾರು 78 ಲಕ್ಷ ಜನರಿಗೆ ಪ್ರತಿವಷರ್À ಪಿಂಚಣಿ ಲಭಿಸುತ್ತಿದೆ ಮತ್ತು 10,411 ಕೋಟಿ ರೂ. ಹಣ ಇಂತಹ ವಿವಿಧ ಪಿಂಚಣಿಗಳಿಗೆ ವೆಚ್ಚವಾಗುತ್ತಿದೆ.
ಕೆಲವರು ಗೊಂದಲ ಸೃಷ್ಟಿ ಮಾಡ್ತಿದ್ದಾರೆ, ಸಾಮಾಜಿಕ ಜಾಲತಾಣ ಹಾಗೂ ವಾಟ್ಸಾಪ್ ಸೇರಿದಂತೆ ಹಲವೆಡೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಅನುಮಾನ ಮೂಡಿ ಕೆಲವು ಪ್ರಶ್ನೆಗಳನ್ನು ಕೇಳ್ತಿದ್ದಾರೆ,
ಈವರೆಗೆ ಯಾವುದೇ ಪಿಂಚಣಿಗಳನ್ನು ಪಡೆಯುತ್ತಿದ್ದರೂ ಸಹ ಗೃಹÀಲಕ್ಷ್ಮಿಯಲ್ಲಿ ಯಾರು ಅರ್ಹರಾಗ್ತಾರೋ ಅವರಿಗೂ ಪಿಂಚಣಿ ನೀಡಲಾಗುತ್ತದೆ, ಗೃಹ ಲಕ್ಷ್ಮಿ ಯೋಜನೆ ಲಾಭ ಪಡೆದವರಿಗೆ ಪಿಂಚಣಿ ಕಟ್ ಮಾಡುವುದಿಲ್ಲ, ವೃದ್ಯಾಪ್ಯ, ಸಂಧ್ಯಾಸುರಕ್ಷಾ, ವಿಧವಾ ವೇತನ ಸೇರಿ ಯಾವುದನ್ನೂ ಮೊಟಕು ಮಾಡುವುದಿಲ್ಲ, ಇದರ ಜೊತೆಗೆ ಹೆಚ್ಚುವರಿಯಾಗಿ ಗೃಹ ಲಕ್ಷ್ಮಿ ಯೋಜನೆ ಲಭಿಸುತ್ತದೆ. ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡಬಾರದು ಎಂದು ಮನವಿ ಮಾಡಿದರು.
ಗೃಹ ಲಕ್ಷ್ಮಿ ಯೋಜನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆ ಆಗಿರುತ್ತದೆ, ಹಣಕಾಸಿನ ವ್ಯವಸ್ಥೆ ಅದೇ ಇಲಾಖೆ ಮಾಡಿಕೊಳ್ಳಲಿದೆ, ಪಿಂಚಣಿಗಳ ವಿಷಯದಲ್ಲಿ ಕಂದಾಯ ಇಲಾಖೆಗೆ ಸಾಕಷ್ಟು ಅನುಭವ ಇರುತ್ತದೆ. ಹೀಗಾಗಿ ಕಂದಾಯ ಇಲಾಖೆ ಮಹಿಳಾ ಕಲ್ಯಾಣ ಇಲಾಖೆಗೆ ಸಹಕಾರ ನೀಡಲು ಸಿಎಂ ಸೂಚನೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 1.3 ಕೋಟಿಗೂ ಹೆಚ್ಚು ಅರ್ಜಿಗಳು ಬರುವ ನಿರೀಕ್ಷೆ ಇಟ್ಟುಕೊಂಡಿದ್ದೇವೆ, ಇಷ್ಟು ಅರ್ಜಿ ಸ್ವೀಕಾರ ಮಾಡಲು ಬಹಳ ದೊಡ್ಡ ಸವಾಲಿನ ಕೆಲಸ. ಇಲಾಖೆಯಲ್ಲಿ ಇಡೀ ವಷರ್À ಸೇರಿ ಇಷ್ಟು ದೊಡ್ಡ ಪ್ರಮಾಣದ ಅರ್ಜಿಗಳು ಬರುತ್ತಿದ್ದವು. ಆದರೆ, ಈ ಯೋಜನೆಯನ್ನು ತ್ವರಿತವಾಗಿ ಜಾರಿ ಮಾಡುತ್ತಿರುವ ಕಾರಣಕ್ಕೆ ಬರುವ ಎರಡು ತಿಂಗಳ ಒಳಗೆ ಇಷ್ಟು ದೊಡ್ಡ ಪ್ರಮಾಣದ ಅರ್ಜಿ ಸ್ವೀಕಾರ ಮಾಡಬೇಕಿದೆ.
ರಾಜ್ಯದ 898 ನಾಡ ಕಚೇರಿಗಳು ಸೇರಿದಂತೆ ಬಾಪೂಜಿ ಸೇವಾ ಕೇಂದ್ರ, ಗ್ರಾಮ 1, ಬೆಂಗಳೂರು 1 ನೇರವಾಗಿ ಮತ್ತು ಸೇವಾ ಸಿಂಧು ಹಾಗೂ ಇದಕ್ಕಾಗಿ ಅಭಿವೃದ್ಧಿಪಡಿಸಲಾಗುತ್ತಿರುವ ಆಪ್ ನ ಮೂಲಕ ಆನ್ ಲೈನ್‍ನಲ್ಲಿ ಸಹ ಅರ್ಜಿ ಸಲ್ಲಿಸಬಹುದು. ಬಹುತೇಕ ಮನೆ ಬಾಗಿಲಿಗೆ ಹೋಗಿ ಆನ್ ಲೈನ್ ಮೂಲಕ ಅರ್ಜಿ ಪಡಯುವ ವ್ಯವಸ್ಥೆಯನ್ನು ಜಾರಿಗೆ ತರಲು ಯೋಜಿಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯ, ಅಟಲ್ ಜನಸ್ನೇಹಿ ನಿರ್ದೇಶಕರಾದ ಕರಿಗೌಡ ಅವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…