ಬಿಸಿ ಬಿಸಿ ಸುದ್ದಿ

ನೀರಿನ ಸಮಸ್ಯೆ ಬಗೆಹರಿಸಲು ಶಾಸಕ ಸೂಚನೆ

ಆಳಂದ : ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ  ಕ್ರಮ ಕೈಗೊಳ್ಳಿ ಇಲ್ಲದಿದ್ದರೆ ಅದಕ್ಕೆ ಅಧಿಕಾರಿಗಳೆ ಹೊಣೆಗಾರರು ಎಂದು ಶಾಸಕ ಬಿ.ಆರ್.ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಖಡಕ್ ಸೂಚಿಸಿದ್ದರು

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಮೊದಲ (ಕೆಡಿಸಿ) ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಶಾಲೆಗಳು ಆರಂಭವಾಗಿದ್ದು,ನೀರು ಒದಗಿಸಿ ಎಂದು ಶಿಕ್ಷಣ ಇಲಾಖೆಗೆ ಸೂಚಿಸಿದರು.

ವಿವಿಧ ಇಲಾಖೆ ಮಾಹಿತಿ ಪಡೆದುಕೊಂಡ ಶಾಸಕ,ಪಟ್ಟಣದಲ್ಲಿ ಎರಡು ದಿನಕ್ಕೆ ನೀರೂ ಬೀಡಿ ಎಂದು ಪುರಸಭೆ ಮುಖ್ಯಾಧಿಕಾರಿಕಾರಿಗೆ ಹೇಳಿದರು.ಅದಕ್ಕೆ ಮೂರು ದಿನಕ್ಕೆ ಬೀಡುಗಡೆ ಮಾಡಲು ಸಾಧ್ಯವಾಗುತ್ತದೆ ಎಂದು ಸಭೆಯ ಗಮನಕ್ಕೆ ತಂದರು.ಕೃಷಿ ಇಲಾಖೆ ಸಂಬಂಧಿಸಿದಂತೆ ಅಧಿಕಾರಿಯಿಂದ ಮಾಹಿತಿ ಪಡೆದು,ಸಹಾಯಕ ನಿರ್ದೇಶನರಿಗೆ ಸರ್ಕಾರಿ ಭಾಷೆ ಬೇಡ್,ವಾಸ್ತವ ಸ್ಥಿತಿ ಅವಲೋಕಿಸಿ ಎಂದರು.

ತಾಲ್ಲೂಕಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕಾದರೆ ಮಾಡಿ,ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದು ಗುಡುಗಿದರು.

ಸಭೆಯಲ್ಲಿ ಅಧಿಕಾರಿಗಳು ಇಂಗ್ಲಿಷ್ ನಲ್ಲಿ  ಇಲಾಖಾ ವರದಿ ತಂದಿದ್ದರು,ಅದಕ್ಕೆ ವಿರೋಧಿಸಿದ ಶಾಸಕ,ಆಡಳಿತ ಭಾಷೆ ಕನ್ನಡ,ಇಂಗ್ಲಿಷ್ ಯಾಕೆ.? ತರುತ್ತಿರಿ ಎಂದು.ಅಧಿಕಾರಿಗಳ ವಿರುದ್ಧ ಗರಂ ಆದರು. ಮುಂದಿನ ಸಭೆಯಲ್ಲಿ ಕನ್ನಡದಲ್ಲಿ ಇರಬೇಕು ಎಂದು ಸೂಚಿಸಿದರು.ಇದೇವೆಳೆಯಲ್ಲಿ ಜೇಸ್ಕಾಂ ಇಲಾಖೆ ಮಾಹಿತಿ ಪಡೆಯುವ ಸಂದರ್ಭದಲ್ಲಿ ವಿದ್ಯುತ್ ಕೈ ಕೊಟ್ಟು ಪ್ರಸಂಗ ನಡೆಯಿತು.ಮಾಹಿತಿ ಪಡೆದುಕೊಂಡ ನಂತರವೇ ವಿದ್ಯುತ್ ಬಂತು.

ಸಭೆಯಲ್ಲಿ ತಹಶಿಲ್ದಾರ ಪ್ರದೀಪಕುಮಾರ ಹಿರೇಮಠ, ವಿಲಾಸರಾಜ  ಪ್ರಸನ್ನ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago