ಬಿಸಿ ಬಿಸಿ ಸುದ್ದಿ

ಉತ್ತಮ ಆಹಾರ ಸೇವನೆಯಿಂದ ಆರೋಗ್ಯಕ್ಕೆ ಮೂಲ ಜೌಷದಿ

ಕಲಬುರಗಿ: ಉತ್ತಮ ಆಹಾರ ಸೇವನೆಯೇ ಆರೋಗ್ಯಕರ ಜೀವನಕ್ಕೆ ಮೂಲ ಜೌಷದಿ. ಆರೋಗ್ಯಕ್ಕೆ ಸಮತೋಲನ ಆಹಾರ ಅತ್ಯವಶಕವಾಗಿದ್ದು, ಪೌಷ್ಠಿಕಾಂಶವುಳ್ಳ ಆಹಾರ ಸೇವನೆ ಮಾಡುವ ಮೂಲಕ ಪೌಷ್ಠಿಕ ಮಟ್ಟವನ್ನು ಕಾಪಾಡಿಕೊಳ್ಳುವತ್ತ ಪ್ರತಿಯೊಬ್ಬರು ಗಮನಹರಿಸಬೇಕೆಂದು ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ದೇವಿಂದ್ರಪ್ಪ ವಿಶ್ವಕರ್ಮ ಹೇಳಿದರು.

ಅವರು ಜೇವರ್ಗಿ ನಗರದ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಿಶ್ವ ಆಹಾರಸುರಕ್ಷತಾ ದಿನಾಚರಣೆಯಲ್ಲಿ ಪ್ರಶಿಕ್ಷಣಾರ್ಥಿ ಚಂದ್ರಕಲಾ ಅವರು ತಯಾರಿಸಿದ ವಿಶೇಷವಾದ ತರಕಾರಿ ಆಹಾರವನ್ನು ತಿನಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ಸಿಹಿಯಾಗಿರುವ ಸೀತಾಫಲ್ ಹಣ್ಣಿನಲ್ಲಿ ವಿಟಾಮಿನ್, ಮಾಗ್ನೇಶಿಯಮ್, ಕ್ಯಾಲ್ಸಿಯಂ, ಐರನ್ ನಂತಹ ಅನೇಕ ಪೋಷಕಾಂಶಗಳಿವೆ. ಈ ಹಣ್ಣನ್ನು ನಿತ್ಯದ ಆಹಾರದಲ್ಲಿ ಸೇವಿಸುವುದರಿಂದ ಎಷ್ಟೋ ಕಾಯಿಲೆಗಳಿಂದ ರಕ್ಷಣೆ ಪಡೆದುಕೊಳ್ಳಬಹುದು. ಹಣ್ಣು ಮಾತ್ರವಲ್ಲ ಇದರ ಎಲೆಗಳು, ಬೇರುಗಳಿಂದ ಅನೇಕ ಉಪಯೋಗಗಳಿವೆ. ಪ್ರಕೃತಿಯ ಆಸರೆಯಿಂದ ಸರಳ ಹಾಗೂ ಸುಲಭವಾಗಿ ದೊರೆಯುವ ಆಹಾರ ಪದಾರ್ಥಗಳಾದ ಹಣ್ಣು, ತರಕಾರಿಗಳಿಂದ ನಾನಾ ಬಗೆಯ ರೋಗಗಳನ್ನು ನಿವಾರಿಸಬಹುದು ಎಂದರು.

ಇತ್ತಿಚೀನ ದಿನಗಳಲ್ಲಿ ತಲೆನೊವು, ಕೆಮ್ಮು-ಕಫ, ಹಲ್ಲು ನೋವು, ಅಜೀರ್ಣದ ಸಮಸ್ಯೆ, ಮೂತ್ರ ತಡೆ, ಜ್ಞಾಪಕ ಶಕ್ತಿ ಸಮಸ್ಯೆ, ಹೃದಯ, ಕಿಡ್ನಿ ಕಿರಿಯರಿಂದ ಹಿಡಿದು ಹಿರಿಯ ನಾಗರಿಕರವರೆಗೂ ಸಮಸ್ಯೆಯಾಗಿದೆ. ಮನೆ ಆಯುರ್ವೇದ ಔಷದಿಗಳನ್ನು ವೈದ್ಯಕೀಯ ಚಿಕಿತ್ಸೆ ಸಿಗುವತನಕ, ಮನೆಯಲ್ಲಿ ಲಭ್ಯವಿರುವ ಆಹಾರ ಪದಾರ್ಥಗಳಿಂದ, ಸುಲಭವಾಗಿ ಲಭ್ಯವಾಗುವ ಗಿಡಮೂಲಿಕೆಗಳಿಂದ ತಾತ್ಕಾಲಿಕ ಉಪಶಮನ ಖಂಡಿತಾ ಸಿಗುತ್ತದೆ. ಮಾನವನು ಆರೋಗ್ಯಪೂರ್ಣವಾಗಿ ಜೀವಿಸಲು ಶುದ್ಧವಾದ ಆಕ್ಸಿಜನ್, ಕುಡಿಯುವ ನೀರು ಮತ್ತು ಆಹಾರ ಅವಶ್ಯಕವಾಗಿವೆ. ನಮ್ಮ ದೇಹಕ್ಕೆ ಬರುವ ಅನೇಕ ಕಾಯಿಲೆಗಳು ಇವುಗಳಿಗೆ ಸಂಬಂಧಿಸಿವೆ. ಶುಚಿಯಾದ, ಸತ್ವಯುತ ಮತ್ತು ಸಮತೋಲಿತವಾದ ಆಹಾರದ ಸೇವನೆಯಿಂದ ದೇಹವು ಆರೋಗ್ಯಪೂರ್ಣವಾಗಿರಲು ಸಾಧ್ಯವಿದೆ ಎಂದರು.

ಈ ಸಂಧರ್ಭದಲ್ಲಿ ಡಾ. ಸೂರ್ಯಕಾಂತ ಕುಲಕರ್ಣಿ, ಗ್ರಂಥಪಾಲಕರಾದ ಸಿದ್ದಣ್ಣ ಹತಗುಂದಿ, ಉಪನ್ಯಾಸಕಿಯರಾದ ಕಾವೇರಿ ಘಾಟೆ, ಕವಿತಾದೇವಿ ಹಿರೇಮಠ, ಪ್ರಥಮ ದರ್ಜೆ ಸಹಾಯಕ ಅನಂತಕುಮಾರ ಸೇರಿ ಮುಂತಾದವರು ಹಾಜರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago