ಕಲಬುರಗಿ: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನಗರದ ಹೊಸ ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸುವಂತೆ ಆಮಂತ್ರಿಸಿದ್ದಾರೆ.
ಕರ್ನಾಟಕದ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದ ೨೦ಕ್ಕೂ ಅಧಿಕ ಜಿಲ್ಲೆಗಳಲ್ಲಿನ ಪ್ರವಾಹ ಪರಿಸ್ಥಿತಿ, ಸಚಿವ ಸಂಪುಟ ವಿಸ್ತರಣೆ ಹಾಗೂ ಇನ್ನಿತರ ವಿಷಯಗಳ ಕುರಿತು ಮೋದಿ ಅವರೊಂದಿಗೆ ಸುಮಾರು ೪೦ ನಿಮಿಷಗಳ ಕಾಲ ಯಡಿಯೂರಪ್ಪ ಅವರು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಮಾತನಾಡಿ, ಕಲಬುರ್ಗಿಯಲ್ಲಿ ನಿರ್ಮಿಸಲಾಗಿರುವ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ ನಿಗದಿಪಡಿಸುವಂತೆ ಸೂಚಿಸಿದ್ದಾರೆ ಎಂದರು.
ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿಯವರಿಗೆ ಆಮಂತ್ರಣಜನರ ವಿಮಾನ ಹಾರಾಟದ ಕನಸು ಶೀಘ್ರವೇ ನನಸಾಗಲಿದೆ. ಹೈದ್ರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಸಂವಿಧಾನದ ಕಲಂ ೩೭೧(ಜೆ) ಅನ್ವಯ ಸಿಗುವ ವಿಶೇಷ ಸ್ಥಾನಮಾನವನ್ನು ಸಂಪೂರ್ಣವಾಗಿ ಆ ಭಾಗಕ್ಕೆ ಒದಗುವಂತೆ ನೋಡಿಕೊಳ್ಳಲಾಗುವುದು. ಕಲಬುರ್ಗಿ ವಿಮಾನ ನಿಲ್ದಾಣವನ್ನು ಕರ್ನಾಟಕ ಸರ್ಕಾರ ಹಾಗೂ ವಿಮಾನ ಅಭಿವೃದ್ಧಿ ಪ್ರಾಧಿಕಾರ ಜಂಟಿ ಸಹಯೋಗದೊಂದಿಗೆ ನಿರ್ಮಿಸಲಾಗಿದೆ ಎಂದು ಅವರು ಹೇಳಿದರು.
ಮೋದಿ ಅವರ ಜತೆ ಚರ್ಚೆ ನಡೆಸಿದ ಬಳಿಕ ಕೇಂದ್ರ ವಿಮಾನಯಾನ ಖಾತೆಯ ರಾಜ್ಯ ಸಚಿವ ಹರ್ದಿಪ್‌ಸಿಂಗ್ ಪುರಿ ಅವರೊಂದಿಗೆ ಯಡಿಯೂರಪ್ಪ ಅವರು ಚರ್ಚೆ ನಡೆಸಿದರು. ಎಎಐ ಮೂಲಕ ಪ್ರಕ್ರಿಯೆ ಚುರುಕುಗೊಳಿಸಿ ಸೆಪ್ಟೆಂಬರ್ ತಿಂಗಳಿನಲ್ಲಿಯೇ ಉದ್ಘಾಟನೆಗೆ ಅನುವು ಮಾಡಿಕೊಡಬೇಕು ಎಂದು ಯಡಿಯೂರಪ್ಪ ಅವರು ಕೇಳಿಕೊಂಡರು.
ಕಲಬುರ್ಗಿ ವಿಮಾನ ನಿಲ್ದಾಣದ ನಿರ್ವಹಣೆ ಹೊಣೆಯನ್ನು ವಿಮಾನ ನಿಲ್ದಾಣ ಪ್ರಾಧಿಕಾರವೇ ವಹಿಸಿಕೊಳ್ಳಲಿದೆ. ಈ ಕುರಿತಂತೆ ಎಎಐ ಹಾಗೂ ಕರ್ನಾಟಕ ಸರ್ಕಾರದ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಯಡಿಯೂರಪ್ಪ ಅವರು ಹೇಳಿದರು.
ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿಯವರಿಗೆ ಆಮಂತ್ರಣ ವಿಮಾನ ನಿಲ್ದಾಣವನ್ನು ಎಎಐ, ಡಿಜಿಸಿಎ ಹಾಗೂ ನಾಗರಿಕ ವಿಮಾನಯಾನ ಭದ್ರತಾ ಪಡೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ವಿಮಾನಯಾನಕ್ಕೆ ಸಿದ್ಧತೆ ನಡೆಸುವಂತೆ ನಾಗರಿಕ ವಿಮಾನಯಾನ ಸಚಿವಾಲಯದ ಹಸಿರು ನಿಶಾನೆ ಸಹ ಸಿಕ್ಕಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…