ಶಹಾಬಾದ: ಇಂದು ಇಡೀ ಜಗತ್ತೇ ‘ಶಾಂತಿ’ಯ ಮಂತ್ರ ಪಠಿಸಬೇಕಾಗಿದೆ. ಭಯೋತ್ಪಾದನೆ, ವೈಷಮ್ಯ, ಕೊಲೆ, ಸುಲಿಗೆ, ಭ್ರಷ್ಟಾಚಾರದಂತಹ ಅನೀತಿಗಳಿಂದ ಜಗತ್ತಿನಲ್ಲಿ ಅಶಾಂತಿ ವಾತಾವರಣ ಉಂಟಾಗುತ್ತಿದೆ. ಪ್ರತಿಯೊಬ್ಬರು ದೇವರ ಮಕ್ಕಳು, ನಾವೆಲ್ಲರು ಒಂದೇ ಎಂಬ ಭಾವನೆ ಮೂಡಬೇಕು. ಎಲ್ಲೆಡೆ ಶಾಂತಿಯುತ ವಾತಾವರಣ ನಿರ್ಮಾಣವಾಗಲು ಸರ್ವರ ಸಹಕಾರ ಅಗತ್ಯವಾಗಿದೆ ಎಂದು ಚಿಂತಕ ಬಸಯ್ಯಸ್ವಾಮಿ ಹೊದಲೂರ ಅಭಿಪ್ರಾಯಪಟ್ಟರು.
ಅವರು ಸಮೀಪದ ಝಾಪೂರ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಆಯೋಜಿಸಲಾದ ‘ಅಂತಾರಾಷ್ಟ್ರೀಯ ಶಾಂತಿಪಾಲಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಶಿವಯೋಗಪ್ಪ ಬಿರಾದಾರ ಮಾತನಾಡಿ, ‘ಶಾಂತಿ’ಯೆಂಬದು ಕೇವಲ ಎರಡಕ್ಷರದ ಶಬ್ದವಲ್ಲ. ಅದರಲ್ಲಿ ಬಹುದೊಡ್ಡ ಶಕ್ತಿಯಿದೆ. ಆಧುನಿಕ ಕಾಲದ ಒತ್ತಡದ ಬದುಕಿನಲ್ಲಿಂದು ಮಾನವ ತನಗೆ ಲಭ್ಯವಿರುವುದನ್ನು ಅನುಭವಿಸಿ ನೆಮ್ಮದಿ ಹಾಗೂ ಶಾಂತಿಯಿಂದ ಜೀವಿಸುವದನ್ನು ಬಿಟ್ಟು, ಮತ್ತೊಬ್ಬರ ಜೊತೆಗೆ ಹೋಲಿಕೆ ಮಾಡುತ್ತಿರುವದರಿಂದ ಕೊರತೆಯೆನಿಸಿ, ಮಾನಸಿಕ ಅಶಾಂತಿಯನ್ನು ಎದುರಿಸುತ್ತಿದ್ದಾನೆ. ಮಾನವೀಯ ಮೌಲ್ಯಗಳು ನಶಿಸುತ್ತಿರುವುದೇ ಅಶಾಂತಿಗೆ ಪ್ರಮುಖವಾದ ಕಾರಣವಾಗಿದೆ. ಮಹಾತ್ಮ ಗಾಂಧಿಜಿಯವರು ಶಾಂತಿ, ಅಹಿಂಸೆಯ ಸಾಕಾರ ಮೂರ್ತಿಯಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ.ಪಾಟೀಲ, ಶಾಲೆಯ ಮುಖ್ಯ ಶಿಕ್ಷಕ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪತ್ರಿಕಾ ಕಾರ್ಯದರ್ಶಿ ದೇವೇಂದ್ರಪ್ಪ ಗಣಮುಖಿ, ಶಿಕ್ಷಕರಾದ ಲಕ್ಕುನಾಯಕ, ಶಾಂತಾಬಾಯಿ ಹಿರೇಮಠ, ವೀರಮ್ಮ ಹಿರೆಕೆನ್ನೂರ್, ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ ಮಾಂಗ್, ಗ್ರಾ.ಪಂ.ಸದಸ್ಯರಾದ ಪೀರಪ್ಪ ದೊಡ್ಡಮನಿ, ಪ್ರಮುಖರಾದ ಅರುಣಕುಮಾರ ಕಟ್ಟಿಮನಿ, ಸುಧಾಕರ ಜಿ.ಅವಟೆ, ಸಂಗೀತಾ ಕಟ್ಟಿಮನಿ, ಶಿಲ್ಪಾ ಹಳ್ಳಿಕಾರ್ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…