ಬೆಂಗಳೂರು; ಸರಕಾರಿ ಸಂಸ್ಥೆಗಳ ಸಾರಿಗೆ ಬಸ್‌ಗಳಲ್ಲಿ ಪ್ರತಿನಿತ್ಯ ಸುಮಾರು 41.85 ಸಾವಿರಕ್ಕೂ ಅಧಿಕ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಶಕ್ತಿ ಯೋಜನೆಯು ಈ ಎಲ್ಲ ಮಹಿಳೆಯರಿಗೆ ವರದಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ವಿಧಾನಸೌಧದದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,ದುಡಿಯುವ ಮಹಿಳೆಯರ ಉತ್ಸಾಹ ಹೆಚ್ಚಿಸಲಿದೆ. ಬಡ ಜನರಿಗೆ ನೀಡುವ ಅರ್ಥಿಕ ನೆರವು ನಾಡಿನ ಒಟ್ಟು ಅರ್ಥಿಕತೆಯ ವಿಕಸನಕ್ಕೆ ಕಾರಣವಾಗಲಿದೆ ಎಂಬ ಉದ್ದೇಶದಿಂದ ಈ ಯೋಜನೆ ಅನುಷ್ಠಾನ ಮಾಡಲಾಗಿದೆ ಎಂದರು.
ವಿದ್ಯುತ್ ದರ ಏರಿಕೆ ವಿಷಯದಲ್ಲಿ ಪ್ರತಿಪಕ್ಷಗಳು ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದೇವೆ. ದರ ಏರಿಕೆ ನಿರ್ಧಾರವು ಈ ಹಿಂದೆಯೇ ಆಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆಇಆರ್‌ಸಿ) ಸ್ವಾಯತ್ತತಾ ಸಂಸ್ಥೆಯಾಗಿದ್ದು, ಪ್ರತಿ ವರ್ಷ ವಿದ್ಯುತ್ ದರ ಪರಿಷ್ಕರಣೆ ಮಾಡುತ್ತದೆ. ಮೇ 12ರಿಂದ ಪರಿಷ್ಕೃತ ವಿದ್ಯುತ್ ದರ ಜಾರಿಗೆ ಬರಲು ಏ.1ರಂದು ಕೆಇಆರ್‌ಸಿ ಆದೇಶ ಹೊರಡಿಸಿತ್ತು ಎಂದರು.