ಕಲಬುರಗಿ: ಗೊಂಡ, ರಾಜಗೊಂಡ, ಕಾಡುಕುರುಬ ಜಾತಿ ಪ್ರಮಾಣಪತ್ರ ಹಾಗೂ ಸಿಂಧುತ್ವ ಪ್ರಮಾಣಪತ್ರ ಕೊಡಬೇಕೆಂದು ಆಗ್ರಹಿಸಿ ಶನಿವಾರ ಶ್ರೀ ಆರ್. ವರ್ತೂರ್ ಪ್ರಕಾಶ್‌ರವರ ಅಭಿಮಾನಿಗಳ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ನಡೆಸಿದರು.
ಸಂಘದ ಅಧ್ಯಕ್ಷ ಶಿವಾಜಿ ಎಸ್. ಪಟ್ಟಣ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗುಂಡಪ್ಪ ಇವಣಿ, ಎಸ್.ಎಂ. ರಾಯಪಲ್ಲಿ, ಸುರೇಂದ್ರ ಪಟ್ಟಣ್, ರುಕ್ಕಪ್ಪ ಟಿ. ಕಾಂಬಳೆ, ಲಕ್ಷ್ಮಣರಾವ್ ಪೋಲಿಸ್ ಪಾಟೀಲ್, ಹಣಮಂತಪ್ಪಾ ಹಿರೇಮನಿ, ರವಿ ಸುಗೂರ್, ರವಿಗೊಂಡ್ ಕಟ್ಟಿಮನಿ, ಅಮೀರಸಾಬ್ ನದಾಫ್, ಮಲ್ಲು ಆಲಗೂಡ್, ಸಿದ್ದಾರೂಢ ಆರ್. ಧುಮ್ಮನಸೂರ್, ವೀರಭದ್ರಪ್ಪ ಬೋಜಪ್ಪಾ, ಶಿವಲಿಂಗ್ ವಗ್ಗಿ, ಶಿವಾಜಿ ಮುಂತಾದವರು ಪಾಲ್ಗೊಂಡಿದ್ದರು.
ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿ, ಜಿಲ್ಲೆಯಾದ್ಯಂತ ಗೊಂಡ, ರಾಜಗೊಂಡ, ಕಾಡುಕುರುಬ ಜಾತಿ ಪ್ರಮಾಣಪತ್ರ ಹಾಗೂ ಸಿಂಧುತ್ವ ಪ್ರಮಾಣಪತ್ರ ಕೊಡಲು ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಧಿಕಾರಿಗಳ ಕಿರುಕುಳ ತಪ್ಪಿಸಲು ಕೂಡಲೇ ಜಿಲ್ಲಾಧಿಕಾರಿಗಳು ಪ್ರಮಾಣಪತ್ರ ಶೀಘ್ರ ವಿಲೇವಾರಿಗೆ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಿತ್ತೂರ್ ಸಂಸ್ಥಾನದ ರಾಜ್ಯ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರೊಂದಿಗೆ ಹೋರಾಡಿ ಬ್ರಿಟಿಷರಿಗೆ ಸಿಂಹಸ್ವಪ್ನರಾಗಿದ್ದ ಸಂಗೊಳ್ಳಿ ರಾಯಣ್ಣ ಅವರಿಗೆ ಬ್ರಿಟಿಷರು ಕುತಂತ್ರಕ್ಕೆ ಸಿಲುಕಿ ೧೯೩೧ರ ಜನವರಿ ೨೬ರಂದು ಗಲ್ಲಿಗೇರಿಸಲ್ಪಟ್ಟರು. ಅವರ ತ್ಯಾಗ, ಬಲಿದಾನ ಇಡೀ ರಾಜ್ಯಕ್ಕೆ ಮತ್ತು ಮುಂಬರುವ ಯುವ ಜನಾಂಗಕ್ಕೆ ಸ್ಫೂರ್ತಿ ಆಗಲು ರಾಜ್ಯ ಸರ್ಕಾರವು ಮುಂಬರುವ ಜನವರಿ ೨೬ರಂದು ಜರುಗುವ ಗಣರಾಜ್ಯೋತ್ಸವ ಹಾಗೂ ಆಗಸ್ಟ್ ೧೫ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರ ಕಡ್ಡಾಯವಾಗಿ ಕಚೇರಿಗಳಲ್ಲಿ ಹಾಕುವಂತೆ ಆದೇಶ ಕೊಡಬೇಕು ಎಂದು ಅವರು ಆಗ್ರಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…