ಬಿಸಿ ಬಿಸಿ ಸುದ್ದಿ

ದೇಶದಲ್ಲಿ ಕರ್ನಾಟಕ ನಂ-1 ಮಾಡುವ ಗುರಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರವು ಪಂಚ ಉಚಿತ ಗ್ಯಾರಂಟಿ ಯೋಜನೆ ಜಾರಿಗೆ ಈಗಾಗಲೆ ಆದೇಶ ಹೊರಡಿಸಿದ್ದು, ಲಿಂಗ ಬೇಧವಿಲ್ಲದೆ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಒದಗಿಸುವುದು ಈ ಯೋಜನೆಗಳ ಮುಖ್ಯ ಉದ್ದೇಶವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ರವಿವಾರ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಆಯೋಜಿಸಿದ ಕಾರ್ಯಕ್ರಮದಲ್ಲಿ “ಶಕ್ತಿ” ಯೋಜನೆ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣಾ ಪೂರ್ವ ನೀಡಿದ ವಾಗ್ಧಾನದಂತೆ ಇಂದು ಮಹಿಳೆಯರು ಸಾರಿಗೆ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸುವ “ಶಕ್ತಿ” ಯೋಜನೆ ಜಾರಿಗೆ ತಂದಿದ್ದೇವೆ. ನುಡಿದಂತೆ ನಡೆದಿದ್ದೇವೆ, ಗ್ಯಾರಂಟಿಗಳ ಜಾರಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ರಾಜ್ಯ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವಾರು ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಮೊದಲ ಪ್ರಯತ್ನವಾಗಿ ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 1.40 ಲಕ್ಷ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ಪ್ರತಿನಿತ್ಯ 7.35 ಲಕ್ಷ ಮಹಿಳಾ ಪ್ರಯಾಣಿಕರು ಇದರ ಸೌಲಭ್ಯ ಪಡೆಯಲಿದ್ದಾರೆ ಎಂದರು.

ಮಾಸಿಕ 3,000 ರೂ. ನಿರುದ್ಯೋಗ ಭತ್ಯೆ ನೀಡುವ “ಯುವ ನಿಧಿ”, ಹಸಿವು ಮುಕ್ತ ಕರ್ನಾಟಕ್ಕಾಗಿ “ಅನ್ನಭಾಗ್ಯ” ಯೋಜನೆಯಡಿ ಪ್ರತಿ ಸದಸ್ಯನಿಗೆ 10 ಕೆ.ಜಿ. ಆಹಾರ ಧಾನ್ಯ, ಮನೆಯ ಯಜಮಾನಿಗೆ 2,000 ರೂ. ಒದಗಿಸುವ “ಗೃಹ ಲಕ್ಷ್ಮೀ”, ಮಾಸಿಕ 200 ಯೂನಿಟ್ ಉಚಿತ ವಿದ್ಯುತ್ ನೀಡುವ “ಗೃಹ ಜ್ಯೋತಿ” ಯೋಜನೆ ಜಾರಿಗೆ ತರಲಾಗುತ್ತಿದ್ದು, ಬರುವಂತಹ ದಿನದಲ್ಲಿ ಈ ಯೋಜನೆಯ ಲಾಭ ರಾಜ್ಯದ ಜನತೆ ಪಡೆಯಲಿದ್ದಾರೆ ಎಂದ ಅವರು ಮುಂದಿನ ದಿನದಲ್ಲಿ ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನು ಸಹ ಭರ್ತಿ ಮಾಡಲು ಚಿಂತನೆ ನಡೆದಿದೆ ಎಂದರು.

*ದೇಶದಲ್ಲಿ ಕರ್ನಾಟಕ ನಂ-1 ಮಾಡುವ ಗುರಿ:*

ನಮ್ಮ ಸರ್ಕಾರ ಬಂದು 1 ತಿಂಗಳೊಳಗೆ ಐದು ಗ್ಯಾರಂಟಿಗಳನ್ನು ಯೋಜನೆ ಜಾರಿಗೆ ತಂದಿದ್ದೇವೆ. ಈ ಯೋಜನೆಗಳಿಗೆ ವಾರ್ಷಿಕ 50 ಸಾವಿರ ಕೋಟಿ ರೂ. ಹೊರೆಯಾದರು ಸಹ ಜನರ ಜೀವನ ಸುಧಾರಣೆ ಮತ್ತು ಕಲ್ಯಾಣದ ನಿಟ್ಟಿನಲ್ಲಿ ಜಾರಿಗೆ ತರಲಾಗುತ್ತಿದೆ. ಈ ಆರ್ಥಿಕ ಹೊರೆಯನ್ನು ನಿಭಾಯಿಸುವ ಶಕ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗಿದ್ದು, ಈಗಾಗಲೇ ಈ ಯೋಜನೆಗಳ ಜಾರಿಗೆ ಬೇಕಾಗುವ ಹಣಕಾಸು ಹೊಂದಾಣಿಕೆಗೆ ಪರ್ಯಾಯ ಮಾರ್ಗ ಕೂಡಾ ಕಂಡುಹಿಡಿಯಲಾಗಿದೆ. ಒಟ್ಟಾರೆ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತರುವ ಮೂಲಕ ದೇಶದಲ್ಲಿಯೇ ಕರ್ನಾಟಕ ನಂ-1 ರಾಜ್ಯ ಮಾಡುವ ಗುರಿ ಹೊಂದಿದ್ದೇವೆ ಎಂದು ಆಶಯ ವ್ಯಕ್ತಪಡಿಸಿದರು.

*ಕಂಡಕ್ಟರ್ ರೂಪದಲ್ಲಿ “ಖರ್ಗೆ”:*

ಶಕ್ತಿ ಯೋಜನೆಗೆ ಚಾಲನೆ ನೀಡಿದ ನಂತರ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೂವು ಮತ್ತು ಬಲೂನ್‍ಗಳಿಂದ ಅಲಂಕೃತಗೊಂಡ ಕಲಬುರಗಿ-ಆಳಂದ, ಕಲಬುರಗಿ-ಸೇಡಂ ಮಾರ್ಗದ ಬಸ್ ಹತ್ತಿದ ಅವರು, ಕಂಡಕ್ಟರ್ ಬಳಿ ಇದ್ದ ಇ.ಟಿ.ಎಂ. ಮಶೀನ್ ಪಡೆದು ತಾವೇ ಖುದ್ದಾಗಿ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ ಇನ್ಮುಂದೆ ರಾಜ್ಯದಲ್ಲಿನ ಸಾರಿಗೆ ಬಸ್‍ಗಳಲ್ಲಿನ ಪ್ರಯಾಣಕ್ಕೆ ಮಹಿಳೆಯರು, ವಿದ್ಯಾರ್ಥಿನಿಯರು ಹಣ ಪಾವತಿಸಬೇಕಿಲ್ಲ. ಉಚಿತ ಟಿಕೆಟ್ ಪಡೆದು ಪ್ರಯಾಣಿಸಬಹುದು ಎಂದು ಹೇಳಿ ಪ್ರಯಾಣಕ್ಕೆ ಶುಭ ಕೋರಿದರು.

ಇದಕ್ಕು ಮುನ್ನ ಪ್ರಸ್ತಾವಿಕವಾಗಿ ಮಾತನಾಡಿದ ಕೆ.ಕೆ.ಆರ್.ಟಿ.ಸಿ. ಎಂ.ಡಿ. ಎಂ.ರಾಚಪ್ಪ, ಕೆ.ಕೆ.ಆರ್.ಟಿ.ಸಿ. ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ನಗರ ಸಾರಿಗೆ-202, ಸಾಮಾನ್ಯ ಸಾರಿಗೆ-1,533, ವೇಗದೂತ-1,427, ಆಯ್ದ ಅಂತರ ರಾಜ್ಯ-216 ಸೇರಿದಂತೆ ಒಟ್ಟು 3,378 ಬಸ್ಸುಗಳಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಆಧಾರ್ ಕಾರ್ಡ್, ವೋಟರ್ ಐ.ಡಿ., ರಾಜ್ಯ ಮತ್ತು ಕೇಂದ್ರ ಸರ್ಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ ತೋರಿಸಿ ಶೂನ್ಯ ಟಿಕೆಟ್ ಪಡೆದು ಉಚಿತ ಪ್ರಯಾಣ ಬೆಳೆಸಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಕನೀಜ್ ಫಾತೀಮಾ, ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವಿಶಾಲ ಧರ್ಗಿ, ಪಾಲಿಕೆ ಸದಸ್ಯರಾದ ವರ್ಷಾ ಜಾನೆ, ಸಚಿನ್ ಶಿರವಾಳ, ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್, ಕೆ.ಕೆ.ಆರ್.ಡಿ.ಬಿ. ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಡಿ. ಬದೋಲೆ, ಕಲಬುರಗಿ ನಗರ ಪೆÇಲೀಸ್ ಆಯುಕ್ತ ಚೇತನ್ ಆರ್., ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತ ಆನಂದ ಪ್ರಕಾಶ ಮೀನಾ, ಕೆ.ಕೆ.ಆರ್.ಟಿ.ಸಿ. ಸಿ.ಟಿ.ಎಂ. ಸಂತೋಷ, ವಿಭಾಗೀಯ ನಿಯಂತ್ರಣಾಧಿಕಾರಿ ಗಂಗಾಧರ, ಸಹಾಯಕ ಆಯುಕ್ತೆ ಮಮತಾ ಕುಮಾರಿ, ಮಾಜಿ ಮೇಯರ್ ಶರಣು ಮೋದಿ, ಡಿ.ಸಿ.ಸಿ. ಅಧ್ಯಕ್ಷ ಜಗದೇವ ಗುತ್ತೇದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 hour ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 hour ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

3 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

3 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

3 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

3 hours ago