14 ರಂದು ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

0
17

ಕಲಬುರಗಿ; ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಆರ್.ಕರ್ನೂಲ್ ಇವರ ಆದೇಶದಂತೆ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಇದೇ ಜೂನ್ 14ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅಫಜಲಪುರ ಹಾಗೂ ಜೇವರ್ಗಿ ತಾಲೂಕುಗಳ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕಲಬುರಗಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಬುರಗಿಯ ಕರ್ನಾಟಕ ಲೋಕಾಯುಕ್ತ ಡಿ.ಎಸ್.ಪಿ. ಯವರಾದ ಸಿದ್ದಲಿಂಗಪ್ಪಗೌಡ ಪಾಟೀಲ್ (ಮೊಬೈಲ್ ಸಂಖ್ಯೆ 9448629630) ಹಾಗೂ ಕರ್ನಾಟಕ ಲೋಕಾಯುಕ್ತ ಪಿ.ಐ. ಗಳಾದ ಧೃವತಾರಾ.ಸಿ. (ಮೊಬೈಲ್ ಸಂಖ್ಯೆ 8861186582) ಅವರು ಅಫಜಲಪುರ ತಾಲೂಕಿನ ತಹಶೀಲ್ದಾರರ ಕಾರ್ಯಾಲಯ ಸಭಾಂಗಣ ಹಾಗೂ ಕರ್ನಾಟಕ ಲೋಕಾಯುಕ್ತ ಡಿ.ಎಸ್.ಪಿ. ಯವರಾದ ಮಂಜುನಾಥ.ಕೆ ಗಂಗಲ್ (ಮೊಬೈಲ್ ಸಂಖ್ಯೆ 9448136853) ಹಾಗೂ ಕರ್ನಾಟಕ ಲೋಕಾಯುಕ್ತ ಪಿ.ಐ. ಗಳಾದ ಅಕ್ಕಮಹಾದೇವಿ (ಮೊಬೈಲ್ ಸಂಖ್ಯೆ 9886864623) ಅವರು ಜೇವರ್ಗಿ ತಾಲೂಕಿನ ತಹಶೀಲ್ದಾರರ ಕಾರ್ಯಾಲಯ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

Contact Your\'s Advertisement; 9902492681

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡುತ್ತಿದ್ದರೆ ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸುತ್ತಿದ್ದರೆ ಅಥವಾ ಕಚೇರಿಗೆ ಅಲೆದಾಡಿಸುತ್ತಿದ್ದಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಯಾರಾದರೂ ಲಂಚ ಕೇಳಿದ್ದಲ್ಲಿ ಕಲಬುರಗಿ ಕರ್ನಾಟಕ ಲೋಕಾಯುಕ್ತರ ಗಮನಕ್ಕೆ ತರಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಐವಾನ್ ಶಾಹಿ, ಕಂಪೌಂಡ್, ಕಲಬುರಗಿ-585102 ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-295364ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here