ಕಲಬುರಗಿ; ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ 2 ವರ್ಷಗಳÀ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮಕ್ಕೆ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಹೊಂದಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ತಹಶೀಲ್ದಾರರಿಂದ ಪಡೆದು ಲಗತ್ತಿಸಬೇಕು. ವಾರ್ಷಿಕ ಆದಾಯ 2.50 ಲಕ್ಷ ರೂ.ಮೀರಿರಬಾರದು. ಕಾನೂನು ಪದವೀಧರರ ವಯೋಮಿತಿ 40 ವರ್ಷಕ್ಕೆ ಮೀರಿರಬಾರದು. ಬಾರ್ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು. ಹಿರಿಯ ನ್ಯಾಯಾವಾದಿಗಳ ಬಳಿ ತರಬೇತಿ ನಿಯೋಜನೆಗೊಂಡಿರುವ ಬಗ್ಗೆ ದೃಢೀಕರಣ ಸಲ್ಲಿಸಬೇಕು. ರಾಜ್ಯ ಬಾರ್ ಕೌನ್ಸಿಲ್‍ನಲ್ಲಿ ನೋಂದಣಿಯಾಗಿ 2 ವರ್ಷ ಒಳಗಡೆ ಇರಬೇಕು. ವಾಸಸ್ಥಳ ಪ್ರಮಾಣ ಪತ್ರ ಸಲ್ಲಿಸಬೇಕು. ಎಲ್ಲಾ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಆಯ್ಕೆಯಾದ ಪ.ಜಾತಿ/ಪ.ಪಂಗಡ ಕಾನೂನು ಪದವೀಧರರಿಗೆ 10,000 ರೂ. ಮಾಸಿಕ ತರಬೇತಿ ಭತ್ಯೆಯನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು 2023ರ ಜುಲೈ 15 ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖೆಯ ತಿತಿತಿ.sತಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಆನ್‍ಲೈನ್ ಅರ್ಜಿಯ ಪ್ರತಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ 2023ರ ಜುಲೈ 15 ರೊಳಗಾಗಿ ಸಲ್ಲಿಸಬೇಕು. ಅಪೂರ್ಣವಾದ ಹಾಗೂ ತಡವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…