ಕಲಬುರಗಿ: ತಾಲೂಕಿನ ನಂದಿಕೂರ ಗ್ರಾಮದ ಬಸ್ ನಿಲ್ದಾಣದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೇರಿ ಅವರು ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿದರು.
ನಂತರ ಮಾತನಾಡಿ, ಶಕ್ತಿ ಯೋಜನೆ ಚಾಲನಾ ನೀಡಿ ಮಾತನಾಡಿ, ಮಹಿಳೆಯರ ಯೋಜನೆಯನ್ನು ಮೊಟ್ಟಮೊದಲಿಗೆ ಜಾರಿ ಮಾಡಿ ಹೆಣ್ಣು ಮಕ್ಕಳಿಗೆ ಶಕ್ತಿ ತುಂಬುವ ಕಾರ್ಯ ಮಾಡಿದ್ದೇವೆ ಎಂದರು. ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಮಾನ್ಯ ಸಿದ್ಧರಾಮಯ್ಯನವರು ಶಕ್ತಿ ಯೋಜನೆಗೆ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸಮರ್ಥ ಮುಖ್ಯಮಂತ್ರಿಗಳಾಗಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಅನುಷ್ಠಾನದ ಬಗ್ಗೆ ಸಚಿವ ಸಂಪುಟದಲ್ಲಿ ಐದಾರು ತಾಸುಗಳ ಸಮಯ ಚರ್ಚೆ ಆಗಿದೆ. ತಾಯಂದಿರ ಮೂಲಕವೇ ವಿನೂತನ ಯೋಜನೆಗಳಿಗೆ ಚಾಲನೆ ಕೊಡುತ್ತಿದ್ದೇವೆ. ಮೊದಲ ಯೋಜನೆಗೆ ಶಕ್ತಿ ಎಂದು ಹೆಸರಿಟ್ಟಿರುವುದು ಇನ್ನು ಅರ್ಥಪೂರ್ಣವಾಗಿದೆ. ಚುನಾವಣಾ ಪೂರ್ವದಲ್ಲಿ ಮಾತುಕೊಟ್ಟಂತೆ ನಾವು ನಡೆದುಕೊಂಡಿದ್ದೇವೆ. ಮಹಿಳೆಯರಿಗೆ ಶಕ್ತಿ ಕಾರ್ಡು ಕೊಡುವ ಪ್ರಕ್ರಿಯೆಯನ್ನು ಬೇಗನೇ ಪೂರ್ಣಗೊಳಿಸುತ್ತೇವೆ. ಜುಲೈ 1ರಿಂದ ಅನ್ನ ಭಾಗ್ಯ ಜಾರಿಯಾಗಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಮಲ್ಲಣ್ಣ ಗೌಡರು, ಶಾಮರಾವ ಪಾಟೀಲ, ಶಿವಲಿಂಗ ಶರಣರು,
ಶ್ರೀಕಾಂತ್ ಉಳ್ಳಿ, ಭೀಮಬಾಯಿ, ಕಾಂತಬಾಯಿ, ಲಕ್ಷ್ಮಣ ಪೂಜಾರಿ, ರಾಚಯ್ಯ ಸ್ವಾಮಿ, ಗ್ರಾಮಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…