ಗೃಹಲಕ್ಷ್ಮಿ ಯೋಜನೆಗೆ ಶೀಘ್ರದಲ್ಲಿ ಅರ್ಜಿ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

0
20

ಬೆಂಗಳೂರು; ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್‍ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ಡಿಬಿಟಿ ಮೂಲಕ ನೀಡುವ ಯೋಜನೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿರುತ್ತದೆ ಹಾಗೂ ಕುಟಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ, ಆದ್ದರಿಂದ ಈ ಯೋಜನೆಯು ಮಹಿಳಾ ಸಬಲೀಕರಣ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ. ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 2023-24ನೇ ಸಾಲಿನಲ್ಲಿ ಅನುμÁ್ಠನಗೊಳಿಸಲು ಸರ್ಕಾರವು ಹರ್ಷಿಸುತ್ತದೆ ಎಂದು ಅವರು ತಿಳಿಸಿದರು.

Contact Your\'s Advertisement; 9902492681

ಶೀಘ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಹಾಗೂ ಈ ಕುರಿತು ಮಾಹಿತಿ ಒದಗಿಸಲಾಗುವುದು.  ಅರ್ಜಿಗಳನ್ನು ಆನ್‍ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೆÇೀರ್ಟಲ್ https://sevasindhugs.karnataka.gov.in/gruhalakshmi ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಎಸ್‍ಎಂಎಸ್ ಮೂಲಕ ಹಾಗೂ ಸೇವಾಸಿಂಧು ಪೆÇೀರ್ಟಲ್ ಮೂಲಕ Autogenerated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ. ಮಂಜೂರಾತಿಯ ನಂತರ ಡಿಬಿಟಿ ಮೂಲಕ ನೇರ ನಗದು ವರ್ಗಾವಣೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತ: ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಯೋಜನೆಯ ಕುರಿತಂತೆ ಸಂದೇಹ/ ಕುಂದು-ಕೊರತೆಗಳಿದ್ದಲ್ಲಿ ಸಹಾಯವಾಣಿ – 1902 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here