ಕಲಬುರಗಿ; ಗುಲಬರ್ಗಾ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಚಿತ್ತಾಪೂರ, ಶಹಾಬಾದ ಹಾಗೂ ಕಾಳಗಿ ಉಪ-ವಿಭಾಗಗಳ ಕಚೇರಿಗಳಲ್ಲಿ ಇದೇ ಜೂನ್ 17 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಗ್ರಾಹಕರ ಕುಂದು ಕೊರತೆ ಸಭೆ ಹಾಗೂ ಸುರಕ್ಷತಾ ದಿನದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಜೇವರ್ಗಿ ಉಪವಿಭಾಗಕ್ಕೆ ಸಂಬಂಧಿಸಿದಂತೆ ಜೇವಗಿ ಜೆಸ್ಕಾಂ ಉಪವಿಭಾಗದ ಕಚೇರಿಯಲ್ಲಿ, ಯಡ್ರಾಮಿ ಉಪವಿಭಾಗಕ್ಕೆ ಸಂಬಂಧಿಸಿದಂತೆ ಯಡ್ರಾಮಿ ಜೆಸ್ಕಾಂ ಉಪವಿಭಾಗದ ಕಚೇರಿ, ಶಹಾಬಾದ ಉಪವಿಭಾಗಕ್ಕೆ ಸಂಬಂಧಿಸಿದಂತೆ ಶಹಾಬಾದ ಜೆಸ್ಕಾಂ ಉಪವಿಭಾಗದ ಕಚೇರಿ, ಚಿತ್ತಾಪುರ ಉಪವಿಭಾಗಕ್ಕೆ ಸಂಬಂಧಿಸಿದಂತೆ ಚಿತ್ತಾಪುರ ಜೆಸ್ಕಾಂ ಉಪವಿಭಾಗದ ಕಚೇರಿ ಹಾಗೂ ಕಾಳಗಿ ಉಪವಿಭಾಗಕ್ಕೆ ಸಂಬಂಧಿಸಿದಂತೆ ಕಾಳಗಿ ಜೆಸ್ಕಾಂ ಉಪವಿಭಾಗದ ಕಚೇರಿಯಲ್ಲಿ ಜರುಗಲಿದೆ.
ಗ್ರಾಮಗಳಲ್ಲಿನ ಸಾರ್ವಜನಿಕರ ವಿದ್ಯುತ್‍ಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಗಾಗಿ ಈ ಸಭೆ ಕರೆಯಲಾಗಿದ್ದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿ; ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗೀಯ ಕಚೇರಿ-1 ರ ವ್ಯಾಪ್ತಿಯಲ್ಲಿ ಬರುವ ಕಲಬುರಗಿ ಗ್ರಾಮೀಣ, ಆಳಂದ, ಕಡಗಂಚಿ, ಅಫಜಲಪೂರ ಹಾಗೂ ಚೌಡಾಪೂರ ಉಪವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಗ್ರಾಹಕರ ಕುಂದುಕೊರತೆಗಳ ಸಭೆಯನ್ನು ಇದೇ ಜೂನ್ 17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಏರ್ಪಡಿಸಲಾಗಿದೆ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಕಲಬುರಗಿ ಗ್ರಾಮೀಣ ಉಪವಿಭಾಗಕ್ಕೆ ಸಂಬಂಧಿಸಿದಂತೆ ಕಮಲಾಪುರ ಜೆಸ್ಕಾಂ ಶಾಖೆಯಲ್ಲಿ, ಆಳಂದ ಉಪವಿಭಾಗಕ್ಕೆ ಸಂಬಂಧಿಸಿದಂತೆ ಆಳಂದ ಉಪವಿಭಾಗದ ಕಚೇರಿ, ಕಡಗಂಚಿ ಉಪವಿಭಾಗಕ್ಕೆ ಸಂಬಂಧಿಸಿದಂತೆ ಕಡಗಂಚಿ ಉಪವಿಭಾಗ ಕಚೇರಿ, ಅಫಜಲಪುರ ಉಪವಿಭಾಗಕ್ಕೆ ಸಂಬಂಧಿಸಿದಂತೆ ಅಫಜಲಪುರ ಉಪವಿಭಾಗದ ಕಚೇರಿ ಹಾಗೂ ಚೌಡಾಪುರ ಉಪವಿಭಾಗಕ್ಕೆ ಸಂಬಂಧಿಸಿದಂತೆ ಚೌಡಾಪುರ ಉಪವಿಭಾಗದ ಕಚೇರಿಯಲ್ಲಿ ಜರುಗಲಿದೆ.
ಈ ಸಭೆಯು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-1ರ ಕಾರ್ಯನಿರ್ವಾಹಕ ಅಭಿಯಂತರರು(ವಿ)ರವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು, ಸಾರ್ವಜನಿಕರ ತಮ್ಮ ಸ್ಥಾವರಗಳÀ ವಿದ್ಯುತ್ ಸಂಬಂಧಿತ ಸಮಸ್ಯೆ ನಿವಾರಣೆಗಾಗಿ ಈ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಉಪಸ್ಥಿತರಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…