ಕಲಬುರಗಿ; ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ “ಅರಿವು ಶೈಕ್ಷಣಿಕ ಸಾಲ” ಯೋಜನೆಯಡಿ ವಿದ್ಯಾಭ್ಯಾಸಕ್ಕಾಗಿ ಸಾಲ ಪಡೆಯಲು ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ಖರು, ಬೌದ್ಧ, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಸಿ.ಇ.ಟಿ./ ನೀಟ್ ಪರೀಕ್ಷೆಗೆ ಆಯ್ಕೆಯಾದ ವಿವಿಧ ವೃತ್ತಿಪರ ಕೋರ್ಸ್‍ಗಳಾದ ವೈದ್ಯಕೀಯ (ಎಮ್.ಬಿ.ಬಿ.ಎಸ್.) ಹಾಗೂ ಬಿ.ಡಿ.ಎಸ್., ಬಿ.ಇ., ಬಿ-ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಹಾಗೂ ಆಯುಶ್‍ದಂತಹ ಪದವಿ ಕೋರ್ಸ್‍ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ “ಅರಿವು ಶೈಕ್ಷಣಿಕ ಸಾಲ ಯೋಜನೆ ”ಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಜೂನ್ 13 ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ನಿಗಮದ http//kmdconline.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2023ರ ಜುಲೈ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಸದರಿ ಅರ್ಜಿಯ ಜೊತೆಗೆ ಆನ್‍ಲೈನ್‍ದಲ್ಲಿ ನೋಂದಾಯಿಸಿರುವ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ಕಚೇರಿಗೆ 2023ರ ಜುಲೈ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ), ಎಸ್.ಆರ್. ರೆಸಿಡೆನ್ಸಿ, ಪ್ಲಾಟ್ ನಂ: 1881, ಮೊದಲನೆ ಮಹಡಿ, ಡಾ. ಎಲ್.ಎಸ್. ರಾಠಿ ಆಸ್ಪತ್ರೆ ಎದುರುಗಡೆ, ಹಳೆ ಜೇವರ್ಗಿ ರಸ್ತೆ, ಕಲಬುರಗಿ-585102 ವಿಳಾಸವನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08472-232425 ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…