ಕಲಬುರಗಿ: ಅಕ್ರಮ ಮರುಳುಸಾಗಾಣಿಕೆ ಮಾಡುತ್ತಿದ್ದ ಟ್ರಾಕ್ಟರ್ ಹರಿದು ಜೇವರ್ಗಿ ತಾಲೂಕು ನೆಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹುಲ್ಲೂರು ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದ್ದು ಇದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಮಯೂರ ತಂದೆ ಭೀಮು ಚವ್ಹಾಣ (51) ಮೃತಪಟ್ಟಿದ್ದು. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಕರೆ ಮಾಡಿ ಮಾತನಾಡಿದ್ದು ತನಿಖೆಗೆ ಆದೇಶಿಸಿದ್ದೇನೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮೃತ ಪೊಲೀಸ್ ಪೇದೆ ಕುಟುಂಬಕ್ಕೆ ಸಾಂತ್ವನ ಹೇಳಿರುವ ಸಚಿವರು ಸರ್ಕಾರವತಿಯಿಂದ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ದೊರಕಿಸಿಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ.
” ಜಿಲ್ಲೆಯಲ್ಲಿ ಅಕ್ರಮ ಮರುಳು ಸಾಗಾಣಿಕೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿದ್ದರೂ ಕೂಡಾ ಈ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಂಬಂಧಿಸಿದ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಆದೇಶ ನೀಡಿ ಈ ಕೂಡಲೇ ಅಕ್ರಮ ಮರುಳು ಸಾಕಾಣಿಕೆ ವಿರುದ್ದ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸಿದ್ದೇನೆ ” ಎಂದು ಅವರು ಹೇಳಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…