ಕಲಬುರಗಿ; ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆಯ ಟ್ರ್ಯಾಕ್ಟರ್ ಹರಿದು ಕರ್ತವ್ಯದ ಮೇಲಿದ್ದ ಮುಖ್ಯಪೇದೆ ಮಯೂರ್ ಚವ್ಹಾಣ್ ಸಾವನ್ನಪ್ಪಿರುವ ಘಟನೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿರುವ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರು ಇದಂದು ಹೇಯ ಕೃತ್ಯವಾಗಿದೆ. ತಪ್ಪಿತಸ್ಥರು ಯಾರೇ ಇರಲಿ, ವರನ್ನು ಬಂಧಿಸಿ ಕಟಿಣ ಶಿಕ್ಷೆಗೆ ಗುರಿ ಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಘಟನೆಯ ಸುದ್ದಿ ತಿಳಿದ ತಕ್ಷಣ ರಾಜ್ಯ ಗೃಹ ಸಚಿವ ಡಾ. ಪರಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿರುವೆ. ತಕ್ಷಣಕ್ಕೆ ಗೃಹ ಸಚಿವರು ಮೃತ ಪೇದೆಯ ಕುಟುಂಕ್ಕೆ 30 ಲಕ್ಷ ರು ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಮೃತ ಕುಟುಂಬದ ಸದ್ಯರೊಬ್ಬರಿಗೆ ಸರ್ಕಾರಿ ನೌಕರಿಗೂ ತಾವು ಮನವಿ ಮಾಡಿದ್ದಾಗಿ ಶಾಸಕ ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಜೇವರ್ಗಿ ಮತಕ್ಷೇತ್ರದಲ್ಲಿ ಎಲ್ಲಿಯೂ ಅಕ್ರಮ ಮರಳುಗಾರಿಕೆಗೆ ಯಾವತ್ತೂ ಅವಕಾಶ ಕೊಡಬಾರದು ಎಂದು ಸಂಬಂಧಪಟ್ಟಂತಹ ಅಧಿಕಾರಿಗಳಿಗೆ ತವು ಯಾವತ್ತೂ ಖಡಕ್ ಸೂಚನೆ ನೀಡುತ್ತಲೇ ಬಂದಿz್ದÉೀನೆ. ಇಲಾಖಾ ಅಧಿಕಾರಿಗಳ ಕಣ್ಣು ತಪ್ಪಿಸಿ ಇಂತಹ ಘಟನೆಗೆ ಕೆಲವರು ಕಾರಣರಾಗುತ್ತಿದ್ದಾರೆಂಬ ಸಂಗತಿ ಗಮನಕ್ಕೆ ಬಂದಿದೆ.
ಈ ಘಟನೆಯ ನಂತರ ಮತ್ತೆ ಜಿಲ್ಲಾ ಎಸ್ಪಿ ಇಶಾ ಪಂತ್ ಹಾಗೂ ಜಿಲ್ಲಾಧಿಕಾರಿ ಯಶ್ವಂತ ಗುರುಕರ್ ಅವರಿಬ್ಬರಿಗೂ ತಾವು ಖುದ್ದು ದೂರವಾಣಿ ಕರೆ ಮಾಡಿ ಮಾತನಾಡಿರೋದಾಗಿ ಹೇಳಿರುವ ಡಾ. ಅಜಯ್ ಸಿಂಗ್ ಜೇವರ್ಗಿ ಮತಕ್ಷೇತ್ರದಲ್ಲಿ ಒಂದು ಹಿಡಿ ಮರಳು, ಮಣ್ಣು ಕೂಡಾ ಅಕ್ರಮವಾಗಿ ಸಾಗಾಟವಾಗಬಾರದು ಎಂಬ ಖಡಕ್ ಎಚ್ಚರಿಕೆ ನೀಡಿದ್ದಾಗಿ ಹೇಳಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…