ಸುರಪುರ:ನಗರದ ಬಸ್ ನಿಲ್ದಾಣದ ಬಳಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು,ವ್ಯಕ್ತಿ ಯಾರು ಎನ್ನುವುದು ತಿಳಿದು ಬಂದಿಲ್ಲ.ಬಸ್ ನಿಲ್ದಾಣದ ತಡೆಗೋಡೆಯ ಹೊರಭಾಗದಲ್ಲಿ ಮಲಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ.
ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು,ಅನಾರೋಗ್ಯ ದಿಂದ ಸಾವನ್ನಪ್ಪಿರಬಹುದು ಎಂದು ಜನರು ಶಂಕೆ ವ್ಯಕ್ತಪಡಿಸುತ್ತಿದ್ದು ಸಾವಿಗೆ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದುಬರಲಿದೆ.
ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಸುರಪುರ ಠಾಣೆ ಪೊಲೀಸ್ ಇನ್ಸ್ಪೇಕ್ಟರ್ ಆನಂದ ವಾಘಮೊಡೆ ಭೇಟಿ ನೀಡಿ ಪರಿಶೀಲನೆ ನಡೆಸಿ,ನಂತರ ಶವವನ್ನು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.