ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರತಿ ವರ್ಷ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡಲಿರುವ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.
2022-23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಲ್ಲಿ ಪ್ರತಿಶತ 90ಕ್ಕಿಂತ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿ,ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲಿದೆ.ಅರ್ಹ ಅಭ್ಯಾರ್ಥಿಗಳು ಸ್ವ-ವಿವರಗಳೊಂದಿಗೆ(ಇತ್ತೀಚಿನ ಒಂದು ಬಾವಚಿತ್ರ,ದೃಢಿಕರಿಸಿದ ಅಂಕಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರ) ಅರ್ಜಿಯನ್ನು ಮಹಾಸಭೆಯ
www.veerashaivamahasabha.in ವೆಬ್‍ಸೈಟ್‍ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಕೇವಲ ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳು ಮಾತ್ರ ಸ್ವೀಕರಿಸುವುದಾಗಿ ತಿಳಿಸಿದ್ದು,ಅಂಚೆ ಅಥವಾ ಖುದ್ದಾಗಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನವಾಗಿದ್ದು ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲೂಕು ಅಧ್ಯಕ್ಷ ಮಂಜುನಾಥ ಎಮ್. ಜಾಲಹಳ್ಳಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.