ಶಹಾಬಾದ: ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಯಾವತ್ತಿಗೂ ನಿಷ್ಪ್ರಯೋಜಕವಾಗುದಿಲ್ಲ ಎಂಬುದಕ್ಕೆ ಈ ಮಕ್ಕಳ ಸಾಧನೆಯೇ ಹೇಳುತ್ತದೆ ಎಂದು ನಗರದ ಮಿನಿರೋಸ್ ಶಾಲೆಯ ಮುಖ್ಯಗುರು ಪರಶುರಾಮ ಹೇಳಿದರು.
ಅವರು ಶನಿವಾರ ನಗರದ ಮಿನಿರೋಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಶಾಲಾ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಲಿಕಾ ಮನೋಭಾವವನ್ನಿಟ್ಟುಕೊಂಡು ಹೆಚ್ಚು ಹೆಚ್ಚು ವಿಷಯಗಳನ್ನು ಸತತ ಪರಿಶ್ರಮದಿಂದ ಅಭ್ಯಾಸ ಮಾಡಿದರೆ ಮಾತ್ರ ನಿರ್ದಿಷ್ಟ ಗುರಿ ಮುಟ್ಟಲು ಸಾಧ್ಯ. ಬದುಕಿನ ಕೊನೆ ಉಸಿರಿರುವವರೆಗೂ ವಿದ್ಯೆಯನ್ನು ಸಂಪಾದಿಸುತ್ತಲೇ ಇರಬೇಕು.ಕಲಿತ ವಿದ್ಯೆಯನ್ನು ಸಮಾಜದ ಹಿತಕ್ಕೆ ಬಳಸಬೇಕು. ಆಗ ಮಾತ್ರ ಬದುಕಿನ ಸಾರ್ಥಕತೆ ದೊರೆಯುತ್ತದೆ ಎಂದು ಹೇಳಿದರು.
ಮಿನಿರೋಸ್ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಶಬ್ಬೀರ್ ಅಹ್ಮದ್ ಮಾತನಾಡಿ, ಹಿಂದುಳಿದ ಕಲ್ಲಿನ ಗಣಿಗಾರಿಕೆಯ ಪ್ರದೇಶದಲ್ಲಿ ಉತ್ತಮ ವಿದ್ಯಾಭ್ಯಾಸ ಮಾಡುವ ಮೂಲಕ ಎಲ್ಲರನ್ನು ಹುಬ್ಬರಿಸವಂತೆ ಸಾಧನೆ ಮಾಡಿರುವದು ಶ್ಲಾಘನೀಯ. ವಿದ್ಯಾರ್ಥಿಗಳು ಎಷ್ಟೇ ಎತ್ತರಕ್ಕೆ ಬೆಳೆದರೂ ಜೀವನದಲ್ಲಿ ಶಿಸ್ತು, ಸಂಯಮದಿಂದ ಕಲಿತು ಹೆತ್ತವರಿಗೆ , ಕಲಿಸಿದವರ ಹೆಸರನ್ನು ತರುವಲ್ಲಿ ಎಂದಿಗೂ ಮರೆಯಬಾರದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಂಸತ್ತು ರಚನೆ ಹಾಗೂ ಅಣಕು ಮತದಾನ ಕಾರ್ಯಕ್ರಮವನ್ನು ಮಾಡಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.