ಸುರಪುರ: ಗುಲಬರ್ಗಾ ವಿಶ್ವವಿದ್ಯಾಲಯದ 41ನೇ ಘಟಿಕೋತ್ಸವದಲ್ಲಿ ಮೂಲತ ಸುರಪುರದವರಾಗಿರುವ ಹಾಗೂ ಸದ್ಯ ಯಾದಗಿರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಪ್ರಲ್ಹಾದ ಜೋಷಿ ಬೀರನೂರ ಅವರ ಪುತ್ರಿ ರಾಜಶ್ರೀ ಜೋಷಿ ಅವರು ಸೂಕ್ಷ್ಮಜೀವಿಶಾಸ್ತ್ರ(ಮೈಕ್ರೋಬಯಾಲಜಿ) ವಿಭಾಗದಲ್ಲಿ ಏಳು ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ರಾಜಶ್ರೀ ಜೋಷಿ ಅವರು ಮೊದನಿಂದಲೂ ಪ್ರತಿಭಾವಂತೆ ವಿದ್ಯಾರ್ಥಿನಿಯಾಗಿದ್ದು ಸತತ ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡುತ್ತಾ ಬಂದಿದ್ದು ಸೂಕ್ಷ್ಮಜೀವಿಶಾಸ್ತ್ರ ವಿಭಾಗದಲ್ಲಿ ಏಳು ಚಿನ್ನದ ಪದಕಗಳು ಒಲಿದು ಬಂದಿದ್ದು ಇವರ ತಂದೆ ಯಾದಗಿರಿಯ ಸರಕಾರಿ ಡಿಗ್ರಿ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಪ್ರಾಧ್ಯಾಪಕರಾಗಿದ್ದು ಹಾಗೂ ಇವರ ತಾಯಿ ಗೃಹಿಣಿ ಆಗಿದ್ದಾರೆ.
ಪ್ರಾಥಮಿಕ ಹಂತದಲ್ಲಿ 5ನೇ ತರಗತಿಯವರೆಗೆ ನಗರದ ಗಾಯತ್ರಿ ಶಾಲೆಯಲ್ಲಿ ಓದಿದ್ದು ನಂತರ ಎಸ್‍ಎಸ್‍ಎಲ್‍ಸಿ ಮಹಾತ್ಮ ಗಾಂಧಿ ಪ್ರೌಢಶಾಲೆ ಹಾಗೂ ಪಿಯುಸಿ ಯಾದಗಿರಿಯ ಆರ್‍ವಿ ಕಾಲೇಜಿನಲ್ಲಿ ಮುಗಿಸಿದ್ದು ಬಿ.ಎಸ್ಸಿ ಪದವಿಯನ್ನು ಬೆಂಗಳೂರನ ಆಚಾರ್ಯ ಕಾಲೇಜ್ ಆಫ್ ಸೈನ್ಸನಲ್ಲಿ ಪೂರೈಸಿದ್ದಾರೆ.
ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಇಂದು (ಸೋಮವಾರ) ನಡೆಯಲಿರುವ 41ನೇ ಘಟಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವದು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…