ಬಿಸಿ ಬಿಸಿ ಸುದ್ದಿ

ತೊಗರಿ ನೆಟೆರೋಗ ಪರಿಹಾರ ವಿತರಣೆಗೆ ಪ್ರಶಾಂತಗೌಡ ಮಾಲಿ ಪಾಟೀಲ ಆಗ್ರಹ

ಕಲಬುರಗಿ: ನೆಟರೋಗದಿಂದ ತೊಗರಿಬೆಳೆಗಳು ಹಾಳಾಗಿದ್ದರಿಂದ ಕಳೆದಬಾರಿ ಬಸವರಾಜ ಬೊಮ್ಮಾಯಿರವರ ನೇತೃತ್ವದ ಬಿಜೆಪಿ ಸರಕಾರ ತೊಗರಿ ಬೆಳೆ ಹಾಳಾದ ರೈತರಿಗೆ ಹೆಕ್ಟರಗೆ 10ಸಾವಿರ ರೂಪಾಯಿ ಕೊಡುವುದಾಗಿ ಘೋಷಣೆ ಮಾಡಿದ್ದು, ಆದರೆ ಇಲ್ಲಿಯವರೆಗೆ ಯಾವೊಬ್ಬರ ರೈತರ ಖಾತೆಗೆ ಹಣ ಜಮಾವಣೆಯಾಗಿರುವುದಿಲ್ಲ.

ಚುನಾಯಿತ ಪ್ರತಿನಿಧಿಗಳು ಅಧಿಕಾರದ ಗದ್ದುಗೆ ಏರುವ ಮುನ್ನ ರೈತರ ಹೆಸರಿನಮೇಲೆ ಆಣೆ ಪ್ರಮಾಣಗಳು ಮಾಡಿ, ಪ್ರಮಾಣವಚನ ಸ್ವೀಕರಿಸುವ ಈ ರಾಜಕಾರಣಿಗಳು, ರೈತರ ಗೋಳು ಕೇಳಲು ಮುಂದಾಗದೆ ಇರುವುದು, ನಾಚಿಕೆಗೇಡಿನ ಸಂಗತಿಯಾಗಿದೆ. ಕೂಡಲೇ ಕಾಂಗ್ರೆಸ್ ನೇತೃತ್ವದ ಸರಕಾರ ಎಚ್ಚೆತ್ತುಕೊಂಡು ನೆಟೆರೋಗದಿಂದ ತೊಗರಿ ಬೆಳೆ ಹಾಳಾದ ರೈತರಿಗೆ ಹೆಕ್ಟರ್‍ಗೆ 20ಸಾವಿರ ರೂಪಾಯಿ ಪರಿಹಾರ ಕೂಡಲೇ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಪ್ರಶಾಂತಗೌಡ ಆರ್. ಮಾಲಿ ಪಾಟೀಲ ಒತ್ತಾಯಿಸಿದ್ದಾರೆ.

ಅಲ್ಲದೆ ಪ್ರಸಕ್ತ ಸಾಲಿನಲ್ಲಿ ಬಿತ್ತನೆ ಕಾರ್ಯಕ್ಕೆ ರೈತರೊಂದಿಗೆ ಅಧಿಕಾರಿಗಳು ಸಹಕರಿಸಿ ಮಾರ್ಗದರ್ಶನ ನೀಡಬೇಕು, ಮಾನ್ಸೂನ್ ಮಳೆಗಳು ಪ್ರಾರಂಭವಾಗುತ್ತಿದೆ. ರೈತ ಬಾಂಧವರು ಬಿತ್ತನೆಗಾಗಿ ಹೊಲಗಳನ್ನು ಸಿದ್ಧಪಡಿಸಿಕೊಂಡಿದ್ದಾರೆ. ಉತ್ತಮ ಗುಣಮಟ್ಟದ ಬೀಜ ಹಾಗೂ ಗೊಬ್ಬರದ ಅಗತ್ಯತೆ ಹೆಚ್ಚಾಗಿದ್ದು, ಕೊರತೆಯಾಗದಂತೆ ಸಂಗ್ರಹ ಮಾಡಿಕೊಂಡು ವಿತರಣಾ ಕಾರ್ಯ ನಡೆಬೇಕಾಗಿದೆ.

ಯಾವುದೇ ತೊಂದರೆಯಾಗದಂತೆ ಈ ನಿಟ್ಟಿನಲ್ಲಿ ಸಂಬಂಧಪಟ್ಟ ಕೃಷಿ ಇಲಾಖೆಯ ಅಧಿಕಾರಿಗಳು ನಿಗಾವಹಿಸಲು ಕೋರಲಾಗಿದೆ. ಇತ್ತಿಚಿಗೆ ಕಳಪೆ ಬೀಜಗಳ ಮಾರಾಟ, ನಕಲಿ ಗೊಬ್ಬರಗಳ ವ್ಯವಹಾರ ಆಗುತ್ತಿರುವ ಪ್ರಸಂಗಗಳು ಜಾಸ್ತಿಯಾಗಿದೆ. ಇದ್ಯಾವುದಕ್ಕೂ ಅವಕಾಶ ಕೊಡದೆ ಅಧಿಕಾರಿ, ಸಿಬ್ಬಂದಿ ವರ್ಗದವರು ಸಹಕರಿಸಬೇಕಾಗಿದೆ. ಅನ್ನದಾನಿಗೆ ಕೈ ಜೋಡಿಸಬೇಕಾಗಿದೆ.

ರೈತ ಸಂಪರ್ಕ ಕೇಂದ್ರಗಳು, ಕೃಷಿ ವಿಜ್ಞಾನಿ ಕೇಂದ್ರಗಳು, ಜಾಗೃತೆ ವಹಿಸಿ ರೈತ, ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ರೈತರಿಗೆ ಸಹಕರಿಸಬೇಕೆಂದು ಮಾಲಿ ಪಾಟೀಲ ಅವರು ಮನವಿ ಮಾಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago