ಅನ್ನ ಭಾಗ್ಯ ಯೋಜನೆಗೆ ಜಾರಿಯಾಗದಂತೆ ಕೇಂದ್ರ ಷಡ್ಯಂತ: ಪ್ರಿಯಾಂಕ್ ಖರ್ಗೆ ಆರೋಪ

0
23

ಕಲಬುರಗಿ: ಕೇಂದ್ರ ಸರ್ಕಾರ ರಾಜ್ಯದ ವಿರುದ್ದ ದ್ವೇಷದ ರಾಜಕಾರಣ ಪ್ರಾರಂಭಿಸಿದ್ದು ಅನ್ನ ಭಾಗ್ಯ ಯೋಜನೆ ಜಾರಿಗೊಳಿಸದಂತೆ ಷಡ್ಯಂತ್ರ ರೂಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಆರೋಪಿಸಿದರು.

ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಕನ್ನಡಿಗರ ಆಸ್ಮಿತೆಗೆ ಧಕ್ಕೆಯಾಗುತ್ತಿರುವುದಕ್ಕೆ, ನಿರುದ್ಯೋಗ ಸಮಸ್ಯೆ ಹೆಚ್ಚಿರುವುದಕ್ಕೆ ರಾಜ್ಯದ ಕನ್ನಡಗಿರು ಬಿಜೆಪಿ ವಿರುದ್ದ ಸಿಡಿದೆದ್ದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿರುವುದಕ್ಕೆ ಕೇಂದ್ರ ಸರ್ಕಾರ ಸಹಿಸಿಕೊಳ್ಳಲು ಆಗದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ದ ದ್ವೇ಼ಷದ ರಾಜಕಾರಣ ಪ್ರಾರಂಭಿಸಿದೆ ಎಂದರು.

ರಾಜ್ಯ ಸರ್ಕಾರದ ವತಿಯಿಂದ 5 ಕೆಜಿ ಹಾಗೂ ಕೇಂದ್ರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿಯನ್ನು ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಜನರಿಗೆ ವಿತರಿಸುವುದಾಗಿ ಸಿಎಂ ಜೂನ್ 2 ರಂದು ಹೇಳಿದ್ದರು ಅದರಂತೆ ಭಾರತೀಯ ಆಹಾರ ನಿಗಮಕ್ಕೆ (Food Corporation of India ) ಗೆ ಪತ್ರ ಬರೆದು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಕೋರಿರುತ್ತಾರೆ. ಆಗ ಉತ್ತರಿಸಿದ ಎಫ್ ಸಿ ಐ ಜೂನ್ 12 ರಂದು ಪತ್ರ ಬರೆದು ಪ್ರತಿ ಕ್ವಿಂಟಾಲ್ ಗೆ ರೂ 3400 ರಂತೆ 2.08 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಒಪ್ಪಿರುತ್ತದೆ.

ಆದರೆ ಅಚ್ಚರಿಯಂತೆ, ಕೇಂದ್ರ ಆಹಾರ ಸರಬರಾಜು ಹಾಗೂ ಸಾರ್ವಜನಿಕ ವಿತರಣಾ ಇಲಾಖೆಯ ಅಣತಿಯಂತೆ ಎಫ್ ಸಿ ಐ ಜೂನ್ 13 ರಂದು ಪತ್ರ ಬರೆದು‌ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುತ್ತದೆ. ಎಫ್ ಸಿ ಐ ನಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದು ಖಾಸಗಿಯವರಿಗೆ ಸರಬರಾಜು ಮಾಡಲು ಸಿದ್ಧರಿದ್ದರೂ ಕೂಡಾ ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುವುದು ಗಮನಿಸಿದರೆ ಕೇಂದ್ರಕ್ಕೆ ಕನ್ನಡಿಗರ ಹಿತಾಸಕ್ತಿ ಕಾಪಾಡುವುದು ಬೇಕಿಲ್ಲ ಹಾಗೂ ರಾಜ್ಯವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವುದು ಬೇಕಿಲ್ಲ ಎಂದು ಗೊತ್ತಾಗುತ್ತದೆ ಎಂದು ಹೇಳಿದರು.

ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ‌ ಎಸ್ ಜೈಶಂಕರ್ ಅಮೇರಿಕಾ ಹಾಗೂ ಯೂರೋಪ್ ದೇಶಗಳಿಗೆ ಆಹಾರ ಧಾನ್ಯ ಸರಬರಾಜು ಮಾಡುವುದಾಗಿ ಹೇಳಿದ್ದಾರೆ. ಇದು ದೇಶದ್ರೋಹವಲ್ಲವೇ? ಎಂದು ಪ್ರಶ್ನಿಸಿದರು.

ಜುಲೈ 1 ರಂದು ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡುವುದಿಲ್ಲವೇ? ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಛತ್ರಿಸಗಡ್ ರಾಜ್ಯವನ್ನು ಸಂಪರ್ಕಸಲಾಗಿದ್ದು ಅವರು 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಒಪ್ಪಿದ್ದಾರೆ ಹಾಗಾಗಿ ಯೋಜನೆ ಜಾರಿಗೊಳಿಸುತ್ತೇವೆ ಆದರೆ ಜುಲೈ 1 ರಂದು ಜಾರಿಗೆ ತರಬೇಕೆಂದರೆ ಮೋದಿ‌ ಮನಸು ಮಾಡಿ ರಾಜ್ಯದ ಜನರು ಮತ ಹಾಕದಿದ್ದರೂ ಪರವಾಗಿಲ್ಲ ಎಂದು ಅಕ್ಕಿ ಸರಬರಾಜು ಮಾಡಿದರೆ ಸಾಧ್ಯವಾಗುತ್ತದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬೇಕಾಗುವಷ್ಟು ಅನುದಾನ‌ ನೀಡಲು ಸಿದ್ದವಿರುವುದಾಗಿ ಹೇಳಿದ ಸಚಿವರು, ಮಳೆ ಕೊರತೆಯಿಂದಾಗಿ ಮೋಡ ಬಿತ್ತನೆ ಕುರಿತಂತೆ ಕಂದಾಯ ಸಚಿವರು ಈಗಾಗಲೇ ಹೇಳಿಕೆ ನೀಡಿರುತ್ತಾರೆ ಎಂದರು.

ಯಾರನ್ನು ತಮ್ಮ ಆಪ್ತ ಕಾರ್ಯದರ್ಶಿ ಮಾಡಿಕೊಳ್ಳುವುದು ತಮ್ಮ ವಿವೇಚನೆ ಎಂದ ಪ್ರಿಯಾಂಕ್ ಖರ್ಗೆ ಕೆಕೆಆರ್ ಡಿಬಿಯ ವಿರುದ್ದ ನನ್ನ ಆರೋಪವಿತ್ತು. ಪ್ರಸ್ತುತ ನಡೆಯುತ್ತಿರುವ ಕೆಕೆಆರ್ ಡಿಬಿ ಅವ್ಯವಹಾರದ ತನಿಖೆಯಲ್ಲಿ ಆಪ್ತ ಕಾರ್ಯದರ್ಶಿ ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ದವೂ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ, ಶಾಸಕರಾದ ಕನೀಜ್ ಫಾತೀಮಾ, ಅಲ್ಲಮಪ್ರಭು ಪಾಟೀಲ, ಬಿ.ಆರ್. ಪಾಟೀಲ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಡೇವಿಡ್ ಸಿಮೆಯೋನ್, ಸುಭಾಷ ರಾಠೋಡ, ಶಿವಾನಂದ ಪಾಟೀಲ ಸೇರಿದಂತೆ ಮತ್ತಿತರಿದ್ದರು‌.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here