ಜೂನ್ 21 ರಂದು ಕ್ಯಾಂಪಸ್ ಸಂದರ್ಶನ

0
14

ಕಲಬುರಗಿ: ಪುಣೆಯ ಶಿಂಡ್ಲರ್ ಇಂಡಿಯಾ ಪ್ರೈ.ಲಿ. ವತಿಯಿಂದ ಐ.ಟಿ.ಐ ವೃತ್ತಿಯ ಎಲೆಕ್ಟ್ರಿಷಿಯನ್, ಫಿಟ್ಟರ್ ಹಾಗೂ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಪಾಸಾದ ವಯೋಮಿತಿ 18 ರಿಂದ 24 ವರ್ಷದೊಳಗಿನ 2021, 2022 ಸಾಲಿನಲ್ಲಿ ಪಾಸಾದ ಹಾಗೂ 2023 ರಲ್ಲಿ ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಿಗೆ ಇದೇ ಜೂನ್ 21 ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಪುರುಷ) ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಮತ್ತು ಐಟಿಐ ಅಂಕಪಟ್ಟಿ, ಇತ್ತೀಚಿನ ಎರಡು ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ಇತರೆ ದಾಖಲಾತಿಗಳೊಂದಿಗೆ ಕಲಬುರಗಿ ಎಂ.ಎಸ್.ಕೆ.ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಯಲ್ಲಿ ಮೇಲ್ಕಂಡ ದಿನದಂದು ನಡೆಯುವ ಕ್ಯಾಂಪಸ್ ಸಂದರ್ಶನಕ್ಕೆ ಹಾಜರಾಗಬೇಕು.

Contact Your\'s Advertisement; 9902492681

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಸೂಚನಾ ಫಲಕವನ್ನು ಹಾಗೂ ಮೊಬೈಲ್ ಸಂಖ್ಯೆ 7259272146 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here