ಕಲಬುರಗಿ: ಮಳೆ ಅಭಾವದಿಂದ ಕಂಗಾಲಾಗಿರುವ ಪ್ರಸ್ತುತ ಕಷ್ಟಕರ ಕಾಲದಲ್ಲಿ ಉದ್ಯೋಗ ಖಾತ್ರಿ ಕೈ ಹಿಡಿದು ಮುನ್ನೆಡೆಸಿದೆ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ ಪಾಟೀಲ್ ಹೇಳಿದರು.
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ 50 ದಿನಗಳ ಕಾಲ ಉದ್ಯೋಗ ಖಾತ್ರಿ ದಿನಗಳನ್ನು ಪೂರೈಸಿದ ಪ್ರಯುಕ್ತ ಉದ್ಯೋ ಖಾತ್ರಿಯಿಂದ ನಿರ್ಮಾಣಗೊಂಡ ಕಾಮಗಾರಿಗಳನ್ನು ವೀಕ್ಷಿಸಿ ಹಾಗೂ ಕಾರ್ಮಿಕರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಮ್ಮ ಭಾಗದಲ್ಲಿಮಳೆ ಕೊರತೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದೇ ಕಾರಣಕ್ಕೆ ಕುಡಿಯುವ ನೀರು ಪೂರೈಕೆ, ಉದ್ಯೋಗ ಖಾತ್ರಿ ಕಾಮಗಾರಿಗಳನ್ನು ವ್ಯಾಪಕವಾಗಿ ಕೈಗೊಳ್ಳಲಾಗಿದೆ ಎಂದರು.