ಕಲಬುರಗಿ: ಪ್ರತಿಯೊಬ್ಬರು ವೈಯಕ್ತಿಕ ಸ್ವಚ್ಛತೆ, ವಾಸಿಸುವ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮನೆಯ ಸುತ್ತ, ರಸ್ತೆಯ ಮೇಲೆ ಕಸ-ಕಡ್ಡಿ ಹಾಕುವುದು ಬೇಡ. ಖಾಲಿ ಸ್ಥಳಗಳಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸಬೇಕು. ಬಯಲು ಶೌಚಕ್ಕೆ ತೆರಳದೆ, ಶೌಚಾಲಯಗಳನ್ನು ನಿರ್ಮಿಸಿಕೊಂಡು, ಅವುಗಳನ್ನು ಬಳಸಬೇಕು. ಇದರಿಂದ ಅನೇಕ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ನೈರ್ಮಲ್ಯ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಪ್ರಾಚಾರ್ಯ ಮೊಹಮ್ಮದ್ ಅಲ್ಲಉದ್ದೀನ್ ಸಾಗರ ಹೇಳಿದರು.
ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್.ಎಸ್.ಎಸ್‍ಘಟಕದ ಸಹಯೋಗದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜೇವರ್ಗಿ ತಾಲಾಕಾ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ ಅಡಿಯಲ್ಲಿ ಶುಕ್ರವಾರ ಕಾಲೇಜಿನ ಸಭಾಗಂಣದಲ್ಲಿ ಏರ್ಪಡಿಸಲಾಗಿದ್ದ ‘ನೈರ್ಮಲ್ಯ (ಶುಚಿತ್ವ) ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.
ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಶಿವಕುಮಾರ ಕಾಂಬಳೆ ಮಾತನಾಡಿ, ಸ್ವಚ್ಛತೆ ಎಂಬುದು ನಿರಂತರವಾಗಿ ಜರುಗುವ ಕ್ರಿಯೆಯಾಗಬೇಕು. ಬಯಲು ಶೌಚಾಲಯದಿಂದ ಪರಿಸರ ಹಾಳಾಗುವದರ ಜೊತೆಗೆ, ಅನೇಕ ಸಾಂಕ್ರಾಮಿಕ ರೋಗಗಳು ಉಂಟಾಗುತ್ತವೆ. ಆದ್ದರಿಂದ ಪ್ರತಿಯೊಂದು ಮನೆಯಲ್ಲಿ ಶೌಚಾಲಯ ಕೋಣೆಯನ್ನು ನಿರ್ಮಿಸಿಕೊಂಡು ಬಳಸುವ ಮೂಲಕ ಸಾಂಕ್ರಾಮಿಕ ರೋಗಗಳನ್ನು ತಡೆದು, ನೈರ್ಮಲ್ಯಕಾಪಾಡಬೇಕು. ಹದಿಹರೆಯದವರು ನಿಮಗೆ ಯಾವುದೇ ರೀತಿಯ ತೊಂದರೆ, ಕಾಯಿಲೆ ಇದ್ದರೆ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಇರುತ್ತದೆ ಎಂದರು.
ಹದಿಹರೆಯದವರ ಆರೋಗ್ಯ ಸಮಸ್ಯೆಗಳು, ಕಾರಣಗಳು, ಮುಂಜಾಗ್ರತಾ ಕ್ರಮಗಳು, ಪರಿಹಾರೋಪಾಯಗಳು, ಬಾಲಕಿಯರ ಸಮಸ್ಯೆಗಳು ಸೇರಿದಂತೆ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಒಂದುವರೆ ಗಂಟೆಯ ಕಾಲ ಸುಧೀರ್ಘವಾಗಿ ವಿವರಿಸಿದರು.
ಸಿಬಿಸಿ ಉಪಾಧ್ಯಕ್ಷ ರವೀಂದ್ರಕುಮಾರ ವೈ.ಕೋಳಕೂರ ಉದ್ಘಾಟಿಸಿ, ಮಾತನಾಡಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ರೇವಪ್ಪ ಕಾಂಬಳೆ, ಅಶೋಕ ಬಡಿಗೇರ, ನಿಂಗಣ್ಣ ಪಾಟೀಲ, ಲಕ್ಷ್ಮೀ, ಕಾಲೇಜಿನ ಉಪನ್ಯಾಸಕರಾದ ರವೀಂದ್ರಕುಮಾರ ಬಟಗೇರಿ, ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ರೇಣುಕಾ ಚಿಕ್ಕಮೇಟಿ, ಉಪನ್ಯಾಸಕರಾದ ಡಾ.ರಂಗಸ್ವಾಮಿ, ಜಮೀಲ್ ಅಹಮ್ಮದ್, ಬಸಲಿಂಗಪ್ಪ ನಾಡಗೇರ, ಸಮೀನಾ ಬೇಗಂ, ರಂಜಿತಾ ಠಾಕೂರ, ಪ್ರ.ದ.ಸ ನೇಸರ ಎಂ.ಬೀಳಗಿಮಠ ಸೇರಿದಂತೆ ಮತ್ತಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…