ಕಲಬುರಗಿ: ನಗರದ ಆಶೀರ್ವಾದ ಕಲ್ಯಾಣಮಂಟಪದಲ್ಲಿ ಶ್ರೀ ಶರಣ ವೀರಶೈವ ಲಿಂಗಾಯತ ಸೌಹಾರ್ದ ಸಹಕಾರ ಸಂಘವನ್ನು ಕೂಡಲಸಂಗಮ ಪಂಚಮಸಾಲಿಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರು ಉದ್ಘಾಟಿಸಿದರು.
ಶರಣಬಸವೇಶ್ವರ ಸಂಸ್ಥಾನದ 9 ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಚಂದ್ರಕಾಂತ ಬಿ. ಪಾಟೀಲ, ಶೈಲಜಾ ತಪಲಿ, ಸೂರ್ಯಕಾಂತ ರಾಕಲೆ, ಶರಣು ಮೋದಿ, ಬಸವರಾಜ ಇಲಕಲ್, ಜಗನ್ನಾಥ ಶೇಗಜಿ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.