ಸುರಪುರ: ನಗರದ ಪೊಲೀಸ್ ಠಾಣೆಗೆ ದೂರು ನೀಡಲು ಬಂದವರ ಮೇಲೆ ಮುಖ್ಯ ಪೊಲೀಸ್ ಪೇದೆಯೊಬ್ಬರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಮುಖಂಡರು ಪೇದೆ ವಿರುದ್ಧ ಠಾಣೆಗೆ ದೂರು ಸಲ್ಲಿಸಿದ್ದಾರೆ.
ನಗರದ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿರುವ ಮಹಿಬೂಬ ಅಲಿಯವರು ನಗರದ ಕಬಾಡಗೇರದಲ್ಲಿ ಎರಡು ಕುಟುಂಬಗಳ ಮದ್ಯೆ ಗಲಾಟೆ ನಡೆದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ದೂರು ನೀಡಲು ಬಂದಿದ್ದರು.ದೂರು ನೀಡಲು ಬಂದವರ ಮೇಲೆ ಮುಖ್ಯ ಪೊಲೀಸ್ ಪೇದೆ ಮಹಿಬೂಬ ಅಲಿಯವರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.ಅಲ್ಲದೆ ದೂರು ನೀಡಲು ಬಂದವರ ಮೇಲೆ ದೌರ್ಜನ್ಯ ಎಸಗಿರುವ ಪೇದೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಠಾಣೆಯ ಪೊಲೀಸ್ ಇನ್ಸ್ಪೇಕ್ಟರ್ ಅವರಿಗೆ ದೂರು ನೀಡಿದ್ದು.ಪಿ.ಎಸ್.ಐ ಕೃಷ್ಣಾ ಸುಬೇದಾರ ಅವರ ಮೂಲಕ ದೂರು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆ ತಾಲೂಕು ಅಧ್ಯಕ್ಷ ಮಲ್ಲಪ್ಪ ನಾಯಕ ಕಬಾಡಗೇರ,ಮುಖಂಡರಾದ ರಾಜು ದರಬಾರಿ,ಶರಣಪ್ಪ ಬೈರಿಮಡ್ಡಿ,ಹೊನ್ನಪ್ಪ ಬೈರಿಮಡ್ಡಿ,ಶಿವರಾಜ ವಗ್ಗಾರ ದೀವಳಗುಡ್ಡ,ರಾಘವೇಂದ್ರ ಕಟ್ಟಿಮನಿ,ರಾಘವೇಂದ್ರ ಗೋಗಿಕೇರ,ತಿಪ್ಪಣ್ಣ ಖಾನಿಕೇರ,ರವಿ ಬಿಚ್ಚಗತ್ತಿಕೇರ,ಹಣಮಂತ ಭಂಡಾರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…