ಶಹಾಬಾದ: ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪಕ್ಕೆ ನಲುಗಿಹೋಗಿದ್ದ ಜನತೆಗೆ ಶನಿವಾರ ಸಾಯಂಕಾಲ ಸುರಿದ ಮಳೆ ಇಳೆಯನ್ನು ತಂಪಾಗಿಸಿ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿತು.
ಸಾಯಂಕಾಲ 5 ಗಂಟೆಗೆ ಪ್ರಾರಂಭವಾದ ಪ್ರಸಕ್ತ ವರ್ಷದ ಮೊದಲ ಮಳೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಸುರಿಯಿತು. ಇದುವರೆಗೂ ಮಳೆಬಾರದೆ ಮನೆಯ ಮೂಲೆ ಸೇರಿದ್ದ ಕೊಡೆಗಳು, ರೇನ್‍ಕೋಟ್‍ಗಳು ಧೂಳು ಕೊಡವಿಕೊಂಡು ಹೊರಗೆ ಬಂದವು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿ ರಸ್ತೆಗಳಲ್ಲ ಬಿಕೋ ಎನ್ನುತ್ತಿದ್ದವು. ಗ್ರಾಮೀಣ ಭಾಗದಿಂದ ವಿವಿಧ ವಸ್ತುಗಳ ಖರೀದಿಗಾಗಿ ನಗರಕ್ಕೆ ಆಗಮಿಸದ್ದ ಜನತೆ ಏಕಾಏಕಿ ಸುರಿದ ಮಳೆಯಿಂದ ರಕ್ಷಣೆ ಪಡೆದುಕೊಳ್ಳಲು ಅಂಗಡಿ ಮುಂಗಟ್ಟುಗಳ ಮುಂಭಾಗದಲ್ಲಿ ಆಶ್ರಯ ಪಡೆದರು.
ಪ್ರಸಕ್ತ ವರ್ಷದ ಆರಂಭವಾದ ಮಳೆ ತಡವಾದರೂ ಬಂತಲ್ಲಾ ಎಂದು ಜನರಲ್ಲಿ ಸಂತೋಷ ಕಂಡಿತು.ರೈತರಲ್ಲಿ ಕೊಂಚ ಮಂದಹಾಸ ಮೂಡಿತು. ನಗರದ ಮುಖ್ಯ ರಸ್ತೆಗಳಲ್ಲಿ ನೀರು ಆವರಿಸಿಕೊಂಡು ಸಂಚಾರಕ್ಕೆ ತೊಂದರೆಯಾದರೆ, ನಗರದ ಸ್ವಾಗತ ಕಮಾನನಿಂದ ಬಸವೇಶ್ವರ ವೃತ್ತದವರೆಗಿನ ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಸಂಕಷ್ಟ ಎದುರಿಸುವಂತಾಯಿತು. ನಗರದ ವಿವಿಧಕಡೆ ವಿದ್ಯುತ್ ಕಣ್ಣು ಮುಚ್ಚಾಲೆ ಕಂಡು ಬಂದಿತು. ರಾತ್ರಿಯೆಲ್ಲಾ ಹನಿ ನೀರು ಕಡಿಯುತ್ತಿರುವುದು ಕಂಡು ಬಂದಿತು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…