ಸುರಪುರ: ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ಬಣಗಾರ ಪೌಂಡೇಶನ್ ವತಿಯಿಂದ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ,ಬಣಗಾರ ಕ್ರಾಂತಿ ಪತ್ರಿಕೆ ಬಿಡುಗಡೆ,ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.ಕಾಂಗ್ರೆಸ್ ಮುಖಂಡ ರಾಜಾ ವೇಣುಗೊಪಾಲ ನಾಯಕ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಂಗಂಪೇಟೆಯ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸೂಗುರೇಶ ವಾರದ್ ಮಾತನಾಡಿ, ಎಲೆಮರೆ ಕಾಯಿಯಂತೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಾಧಕರನ್ನು ಸಂಘ ಸಂಸ್ಥೆಗಳು ಅವರನ್ನು ಹುಡುಕಿ ಗುರುತಿಸುವುದು ಶ್ಲಾಘನೀಯ ಇಂತಹ ಸಾಧಕರನ್ನು ಗುರುತಿಸಿ ಸನ್ಮಾನಿಸುವುದರಿಂದ ಅವರಲ್ಲಿ ಸೇವೆ ಸಲ್ಲಿಸುವ ಹುಮ್ಮಸ್ಸು ಮತ್ತಷ್ಟು ಹೆಚ್ಚಿಸುತ್ತದೆ ಎಂದರು.
ಹಿರಿಯ ಸಂಪಾದಕ ಸುಭಾಸ ಬಣಗಾರ ಮಾತನಾಡಿ ಇಂದಿನ ದಿನಮಾನದಲ್ಲಿ ಆರೋಗ್ಯಕ್ಕೆ ಯೋಗ ಹಾಗೂ ಜ್ಞಾನಾರ್ಜನೆಗೆ ಪುಸ್ತಕಗಳನ್ನು ಓದುವುದು ತುಂಬಾ ಮುಖ್ಯ ಪ್ರತಿಯೊಬ್ಬರು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗದ ಕೊಡುಗೆ ತುಂಬಾ ಮಹತ್ವದ್ದಾಗಿದ್ದು ಯೋಗವನ್ನು ಪ್ರತಿನಿತ್ಯ ಅಭ್ಯಾಸ ಮಾಡಬೇಕು ಎಂದ ಅವರು ಮಕ್ಕಳು ಇಂದು ಮೊಬೈಲ್ ಚಟಕ್ಕೆ ಬಲಿಯಾಗಿ ಪುಸ್ತಕಗಳು ಹಾಗೂ ಪತ್ರಿಕೆಗಳನ್ನು ಓದುವದರ ಕಡೆಗೆ ಹೆಚ್ಚು ಗಮನಹರಿಸುತ್ತಿಲ್ಲ ನಮ್ಮ ಜ್ಞಾನದ ಮಟ್ಟವನ್ನು ಹೆಚ್ಚಿಸಲು ಪುಸ್ತಕಗಳನ್ನು ಓದುವುದು ತುಂಬಾ ಮುಖ್ಯ ಎಂದ ಅವರು ಪತ್ರಿಕೆಗಳು, ನಿಯತಕಾಲಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಬಹುದಾಗಿದೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.
ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು,ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ ಉದ್ಘಾಟಿಸಿದರು, ಬಣಗಾರ ಸಮಾಜದ ಗೌರವಾಧ್ಯಕ್ಷ ಸುರೇಶ ಚನ್ನಿ ಬಣಗಾರ ಕ್ರಾಂತಿ ಪತ್ರಿಕೆ ಬಿಡುಗಡೆಗೊಳಿಸಿದರು, ಶಂಕರಪ್ಪ ಬಣಗಾರ ಅಧ್ಯಕ್ಷತೆ ವಹಿಸಿದ್ದರು, ಬಣಗಾರ ಫೌಂಡೇಷನ್ ಅಧ್ಯಕ್ಷ ಪ್ರಕಾಶ ಬಣಗಾರ, ಕಸಾಪ ತಾಲೂಕು ಅಧ್ಯಕ್ಷ ಶರಣಬಸವ ಯಾಳವಾರ, ಚಂದ್ರಶೇಖರ ಮಸ್ಕಿ, ಪತಂಜಲಿ ಮಹಿಳಾ ಯೋಗ ಶಿಕ್ಷಕಿ ವಿಮಲಾಕ್ಷಿ ಸಿಂದಗಿ, ಮಹಾಂತೇಶ ಸಮಾಳ, ಭಂಡಾರೆಪ್ಪ ನಾಟೇಕಾರ, ಅನಿಲ ಕವಿಶೆಟ್ಟಿ, ಅಂಜನಾ ಉಂಪಾಲಿ, ಆರತಿ ಕಾನಗು ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾಧಕರಾದ ಶಿಲ್ಪಾ ಆವಂಟಿ, ಡಾ.ಗೀತಾ ಗಿಂಡಿ, ಮಲ್ಲಿಕಾರ್ಜುನ ಕೊಂಗಂಡಿ,ನರಸಿಂಹ ವೈದ್ಯ,ಸಂತೋಷ ಸಜ್ಜನ್ ಹೆಡಗಿನಾಳ, ಉಮೇಶ ಚನ್ನಿ, ಹನುಮಗೌಡ ದಳಪತಿ ಸೇರಿದಂತೆ ಅನೇಕರನ್ನು ಹಾಗೂ ಈ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಫೌಂಡೇಷನ್ ವತಿಯಿಂದ ಸನ್ಮಾನಿಸಲಾಯಿತು.
ವಿಜಯಕುಮಾರ ಬಣಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು, ರಾಜಶೇಖರ ಬಳ್ಳಾರಿ ನಿರೂಪಿಸಿದರು ಜಗದೀಶ ಸರಾಫ್ ವಂದಿಸಿದರು.
ಕಲಬುರಗಿ: ಸಿಪಿಐ(ಎಂ) ಪಕ್ಷವು ನವೆಂಬರ್ 24,25 ನವೆಂಬರ್ ರಂದು ಎರಡು ದಿನಗಳ ಕಾಲ ಜಿಲ್ಲಾ ಸಮ್ಮೇಳನ ನಡೆದು ಜಿಲ್ಲಾ ಕಾರ್ಯದರ್ಶಿಯಾಗಿ…
ಕಲಬುರಗಿ: ಜಯನಗರ ಬಡಾವಣೆಯ ಹಳೆ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗಾಗಿ ಕಲಬುರಗಿ ಬೀದರ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರಾದ ಡಾ.ಬಿ.ಜಿ.ಪಾಟೀಲ ಇವರ…
ಕಲಬುರಗಿ: ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ ಕಾರ್ಯಕ್ರಮ ವನ್ನು ಸವಿಧಾನ ಪ್ರತಿಯನ್ನು ಓದುವ ಮೂಲಕ ಸವಿಧಾನ ಶಿಲ್ಪಿ…
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ 75ನೇ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್…
ಚಿಂಚೋಳಿ: ತಾಲೂಕಿನ ಸಾಲೆಬೀರನಳ್ಳಿ ಗ್ರಾಮದ ನೀವೃತ ಮುಖ್ಯಗುರುಗಳಾದ ಅಲ್ ಹಜ್ ಶಮಶೋದ್ದಿನ ಬೀರಗಿ ಪಟೇಲ್ (86) ಮಂಗಳವಾರ ನಿಧನರಾದರು. ಅವರಿಗೆ…