ಅಫಜಲಪೂರ: ತಾಲೂಕಿನ ಕರಜಗಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಯುವಕ ಸಂಘದ ವತಿಯಿಂದ ರಾಯಣ್ಣನವರ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸೈನಿಕ ಕಾಶಿನಾಥ ಬಬಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾನ್ ಯೋಧನಾಗಿದ್ದು, ದೇಶ ರಕ್ಷಣೆಗಾಗಿ ಅನೇಕ ಹೊರಾಟಗಳನ್ನು ಮಾಡಿ ವಿಜಯ ಪತಾಕೆಯನ್ನು ಹಾರಿಸಿದ ಮಹಾನ್ ದೇಶ ಪ್ರೇಮಿ ಅವರ ದೇಶ ಪ್ರೇಮದ ಆದರ್ಶ ಗುಣಗಳನ್ನು ಇಂದಿನ ಯುವಕರು ಅಳವಡಿಸಿಕೊಳ್ಳಬೇಕು.
ಬ್ರಿಟೀಷ ಸೈನ್ಯವನ್ನು ಕ್ಷಣಾರ್ಧದಲ್ಲಿಯೇ ಎದುರಿಸುವ ಸಾಮರ್ಥ್ಯ ರಾಯಣ್ಣನಲ್ಲಿತ್ತು. ಸಾಮನ್ಯ ಸೈನಿಕನಾಗಿದ್ದು, ದುಷ್ಠ ಬ್ರಿಟೀಷರ ಎದೆ ನಡುಗಿಸಿದ. ದೇಶಕ್ಕಾಗಿ ಹೋರಾಡಿ ಅಲ್ಪಾವಧಿಯಲ್ಲೆಯೇ ಪ್ರಾಣವನ್ನೆಕೊಟ್ಟ ದಿಟ್ಟ ಹೋರಾಟಗಾರನಾಗಿದ್ದನೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಚಿಕ್ಕ ಮಕ್ಕಳಿಂದ ಕಿತ್ತೂರರಾಣಿ ಚನ್ನಮ್ಮ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಹೋರಾಟದ ಕೆಲವು ನೆನಪು ನಾಟಕದ ಮೂಲಕ ಪ್ರದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮಣ ಬಳಗಾರ, ಕಾರ್ಯದರ್ಶಿ ಖಾಜಪ್ಪ ಬಳಗಾರ, ಉಪಾಧ್ಯಕ್ಷ ಮಾಳಪ್ಪ ಅಂಜುಟಗಿ, ಸೇರಿದಂತೆ ಇತರರು ಇದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…