ಬಿಸಿ ಬಿಸಿ ಸುದ್ದಿ

ಶಹಾಪುರ ತಾಲ್ಲೂಕು 3ನೇ ಸಾಹಿತ್ಯ ಸಮ್ಮೇಳನ ಲಿಂಗಣ್ಣ ಪಡಶೆಟ್ಟಿ ಸರ್ವಾಧ್ಯಕ್ಷರಾಗಿ ಆಯ್ಕೆ

ಶಹಾಪುರ: ತಾಲ್ಲೂಕಿನ ಸಗರ ಗ್ರಾಮದಲ್ಲಿ ಜು. 17ರಂದು ನಡೆಯಲಿರುವ ಶಹಾಪುರ ತಾಲ್ಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಲಿಂಗಣ್ಣ ಪಡಶೆಟ್ಟಿ ಆಯ್ಕೆಯಾಗಿದ್ದಾರೆ.

ತಾಲ್ಲೂಕು ಕಸಾಪ ಅಧ್ಯಕ್ಷ ರವೀಂದ್ರ ಹೊಸಮನಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಕಸಾಪ ಕಾರ್ಯಕಾರಿ ಸಭೆಯಲ್ಲಿ ಲಿಂಗಣ್ಣ ಪಡಶೆಟ್ಟಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಾಲ್ಲೂಕು ಕಸಾಪ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಹಾರಣಗೇರಾ ತಿಳಿಸಿದ್ದಾರೆ.

ಸಭೆಯಲ್ಲಿ ಸಾಹಿತಿಗಳಾದ ಡಿ.ಜಿ. ಬಳೂರಗಿ, ಡಿ.ಎನ್. ಅಕ್ಕಿ ಡಾ. ಅಬ್ದುಲ್ ಕರಿಂ ಮುಂತಾದವರ ಹೆಸರುಗಳು ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದವು. ಆದರೆ ಯಾದಗಿರಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಶಹಾಪುರದಲ್ಲೇ ನಡೆಯುವುದರಿಂದ ಆಗ ಆ ಹಿರಿಯರ ಹೆಸರುಗಳನ್ನು ಪ್ರಸ್ತಾಪಿಸಲಾಗುವುದು ಎಂಬ ಅಭಿಪ್ರಾಯಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪಡಶೆಟ್ಟಿ ಅವರ ಹೆಸರನ್ನು ಅಂತಿಮಗೊಳಿಸಲಾಯಿತು ಎಂದು ತಿಳಿಸಿದ್ದಾರೆ.

ಸಮ್ಮೇಳನಾಧ್ಯಕ್ಷರ ಪರಿಚಯ: ಶಹಾಪುರ ತಾಲ್ಲೂಕಿನ ಸಗರ ಗ್ರಾಮದ ಶಿವಣ್ಣ ಮಹಾದೇವಪ್ಪ ಅವರ ಉದರದಲ್ಲಿ 1947 ಜನವರಿ 8ರಂದು ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಸಗರದಲ್ಲಿ ಪೂರೈಸಿ ಹೆಚ್ಚಿನ ವ್ಯಾಸಾಂಗವನ್ನು ಶಹಾಪುರದಲ್ಲಿ ಮುಗಿಸಿದರು.

ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕರಾಗಿ 30 ವರ್ಷ ಸೇವೆ ಸಲ್ಲಿಸಿರುವ ಪಡಶೆಟ್ಟಿ ಅವರು ಶಹಾಪುರ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ ನ ವಲಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

ಭಾರತ ನಾರಿ ಮತ್ತು ಸಾಹುಕಾರ ಗದ್ದಲ ಎಂಬ ಎರಡು ನಾಟಕ ಕೃತಿಗಳು ಸೇರಿದಂತೆ ಸಾಹಿತ್ಯ, ಸಂಸ್ಕøತಿಗೆ ಸಂಬಂಧಿಸಿದ ಹಲವಾರು ಲೇಖನಗಳನ್ನು ಬರೆದಿದ್ದಾರೆ. ಹಲವಾರು ಸಂಘ ಸಂಸ್ಥೆಗಳಿಂದ ಸಾಕಷ್ಟು ಪ್ರಶಸ್ತಿ, ಪುರಸ್ಕಾರ ಲಭಿಸಿವೆ.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

4 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

4 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

4 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

4 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

4 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

4 hours ago