ಮಾದಕವಸ್ತುಗಳು ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮಾರಕ; ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

0
15

ಬೆಂಗಳೂರು; ಮಾದಕವಸ್ತುಗಳು ಮುಂದಿನ ಪೀಳಿಗೆಯ ಭವಿಷ್ಯಕ್ಕೆ ಮಾರಕವಾಗಲಿದೆ. ಹೀಗಾಗಿ ಇದನ್ನು ಕೊನೆಗೊಳಿಸಲು ನಾವೆಲ್ಲರೂ ಮಕ್ಕಳು, ಯುವಕ / ಯುವತಿಯರಿಲ್ಲ್ಲಿ ಹಾಗೂ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇಂದು ವಿಶ್ವ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ, ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಗಾಂಧಿ ಸ್ಮಾರಕ ನಿಧಿ ಸಹಯೋಗದೊಂದಿಗೆ ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಡ್ರಗ್ಸ್, ಮಾದಕ ವಸ್ತುಗಳು ನಿಯಂತ್ರಣ ಮಾಡುವುದರ ಮೂಲಕ ಸಮಾಜವನ್ನು ರಕ್ಷಿಸಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕು. ಮಕ್ಕಳಲ್ಲಿ ಡ್ರಗ್ಸ್ ಸೇವನೆಯಿಂದ ಆಗಬಹುದಾದ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಡ್ರಗ್ಸ್ ವಿರುದ್ಧ ಹೋರಾಡಲು ಮಕ್ಕಳಿಗೆ ಉತ್ತೇಜನ ನೀಡಿದರು.

Contact Your\'s Advertisement; 9902492681

ಮಕ್ಕಳು, ಯುವಕರು ಈ ದೇಶದ ಆಸ್ತಿ. ಅವರು ನಮ್ಮ ಸಂಸ್ಕøತಿ ಉಳಿಸಿಕೊಂಡು, ವಿದ್ಯಾವಂತರಾಗಿ ವಿಶ್ವ ಮಟ್ಟದಲ್ಲಿ ಕೆಲಸ ಮಾಡುತ್ತಿರುವುದರಿಂದ ಇಂದು ಬೆಂಗಳೂರು, ರಾಜ್ಯ ಹಾಗೂ ದೇಶಕ್ಕೆ ಇಂದು ವಿಶ್ವಮಟ್ಟದಲ್ಲಿ ಹೆಸರು ಬಂದಿದೆ. ಇಲ್ಲಿರುವ ಮಕ್ಕಳು ವಿಶ್ವದ ಯಾವುದೇ ಉನ್ನತ ಹುದ್ದೆಗೆ ಏರಬಹುದು. ನೀವು ಅಂದುಕೊಂಡಿದ್ದನ್ನು ಸಾಧಿಸಲು ಡ್ರಗ್ಸ್ ವ್ಯಸನದಂತ ದುಶ್ಚಟಗಳಿಂದ ದೂರ ಉಳಿಯಬೇಕು. ಆಗ ಮಾತ್ರ ಗುರಿ ಮೀರಿ ಸಾಧನೆ ಮಾಡಲು ಸಾಧ್ಯ ಎಂದರು.

ಮುಂದೆ ಅಪ್ಪಿತಪ್ಪಿ ನಿಮ್ಮ ಸ್ನೇಹಿತರು ಅಥವಾ ಪರಿಚಯದವರಲ್ಲಿ ಯಾರಾದರೂ ಡ್ರಗ್ಸ್ ವ್ಯಸನಿಗಳಾದರೆ ಪೆÇಲೀಸರು ಬಂಧಿಸಿ, ನ್ಯಾಯಾಲಯದಲ್ಲಿ ಶಿಕ್ಷೆ ಆಗಲಿದೆ ಎಂಬ ಸಂದೇಶ ನಿಮಗೆ ಅರಿವಾಗಲಿ ಎಂದು ಇಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ನಮ್ಮ ರಾಜ್ಯದಲ್ಲಿ ಬೇರೆ ರಾಜ್ಯಗಳಿಗಿಂತ ಉತ್ತಮ ನಿಯಂತ್ರಣ ಮಾಡಲಾಗಿದೆ. ಡ್ರಗ್ಸ್ ಸೇವನೆ ಮಾಡಿದರೆ ನೋವು, ಸಾವು ಎರಡೂ ಬರುತ್ತದೆ. ಹೀಗಾಗಿ ಇದರ ಬಗ್ಗೆ ಬಹಳ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ಮಾತನಾಡಿ, ಮಾದಕ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಮಾದಕ ವ್ಯಸನಿಗಳನ್ನು ಪ್ರೀತಿಯಂದ ನಡೆಸಿಕೊಂಡು ಅವರಿಗೆ ಸಮಾಲೋಚನೆ ನಡೆಸÀಲಾಗುವುದು. ಯುವ ಪೀಳಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸದೃಢರಾಗಬೇಕು ಎಂದು ಅವರು ತಿಳಿಸಿದರು.

ನಂತರ ಗಣ್ಯರು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳೊಂದಿಗೆ ಬೃಹತ್ ಜಾಗೃತಿ ಜಾಥಾವನ್ನು ವಿಧಾನಸೌಧದಿಂದ ಆರಂಭಿಸಿ ಕಂಠೀರವ ಕ್ರೀಡಾಂಗಣದಲ್ಲಿ ಕೊನೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸ್ವಾಗತ ಭಾಷಣ ಮಾಡಿದರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ನಾಡೋಜ ಡಾ.ವೂಡೆ ಪಿ.ಕೃಷ್ಣ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಜಾಥಾದಲ್ಲಿ ಸಾವಿರಾರು ಕಾಲೇಜು ವಿದ್ಯಾರ್ಥಿಗಳು, ಸ್ವಯಂ ಸೇವಕಿಯರು, ಸಂಬಂಧಪಟ್ಟ ಕ್ರಮಾಧಿಕಾರಿಗಳು, ಇತರೆ ಸಂಘಟನೆಯ ಸದಸ್ಯರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here