ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯವರೆಗೆ ಭವ್ಯ ಮೆರವಣಿಗೆ ನಡೆಸಿ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಶಾಸಕರಾದ ಎಂ.ವಾಯ್.ಪಾಟೀಲ, ಖನಿಜ್ ಫಾತಿಮಾ, ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ವೀರನಾಯಕ, ಗ್ರಾ.ಪಂ.ಸದಸ್ಯರಾದ ರಾಜೇಶ ಎಸ್.ಕಮಕನೂರ, ಮುಖಂಡರಾದ ರಾಜಗೋಪಾಲ ರೆಡ್ಡಿ, ನೀಲಕಂಠರಾವ ಮೂಲಗೆ, ಲಿಂಗರಾಜ ತಾರಫೈಲ್, ಲಿಂಗರಾಜ ಕಣ್ಣಿ, ಶಿವಾನಂದ ಹೊನಗುಂಟಿ, ಈರಣ್ಣ ಝಳಕಿ, ಸಂದೇಶ ಕಮಕನೂರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.