ಶಹಾಬಾದ: ತಾಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿರುವ ಡಾ.ರಶೀದ್ ಮರ್ಚಂಟ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಅನ್ವರ ಪಾಶಾ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಶಹಾಬಾದ ತಾಲೂಕಿನಲ್ಲಯೇ ಹೆಸರುವಾಸಿಯಾದ ವ್ಯಕ್ತಿಯೆಂದರೆ ಡಾ.ರಶೀದ್ ಮರ್ಚಂಟ್. ಸುಮಾರು 4 ದಶಕಗಳಿಂದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುಮಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ವೃತ್ತಿಯಿಂದ ವೈದ್ಯರಾಗಿದ್ದು, ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದಾರೆ.ಅಲ್ಲದೇ ಬಡರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ವೈದ್ಯರೆಂದರೆ ಡಾ.ರಶೀದ್. ಈ ಭಾಗದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದೆಯೆಂದರೆ ಇವರ ನಿಸ್ವಾರ್ಥ ಸೇವೆಯಿಂದಲೇ ಎಂಬುದು ಎರಡು ಮಾತಿಲ್ಲದೀ ಹಿಂದೆ ಶಹಾಬಾದ ಮತಕ್ಷೇತ್ರದಿಂದ ಬಾಬುರಾವ ಚವ್ಹಾಣ ಮಂತ್ರಿಯಾಗಿದ್ದು, ಜಿ.ರಾಮಕೃಷ್ಣ ಅವರು ಶಾಸಕರಾಗಿದ್ದು ನಮ್ಮ ಮತಕ್ಷೇತ್ರದಲ್ಲಿ ಹೆಚ್ಚಿನ ಲೀಡ್ ಕೊಟ್ಟಿದ್ದೆ ಕಾರಣ. ಪಕ್ಷದಲ್ಲಿ ಶಿಸ್ತು ಮತ್ತು ಒಗ್ಗಟ್ಟಿನ ಪ್ರದರ್ಶನ ನೀಡಿದ್ದರಿಂದ ಬಿಜೆಪಿ ಶಾಸಕರಾಗಿದ್ದರೂ ಕೂಡ, ನಗರಸಭೆಯಲ್ಲಿ ಅತ್ಯಧಿಕ ಸದಸ್ಯರನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.
ನಗರಸಭೆಯ ಚುಕ್ಕಾಣಿ ಕಾಂಗ್ರೆಸ್ ಪಕ್ಷದ ಹಿಡಿತದಲ್ಲಿದೆ.ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಸುಮಾರು ದಶಕಗಳಿಂದ ಪಕ್ಷಕ್ಕಾಗಿ ದುಡಿದ ಡಾ.ರಶೀದ್ ಮರ್ಚಂಟ್ ಅವರನ್ನು ಗುರುತಿಸಿ, ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿದರೆ ಪಕ್ಷಕ್ಕೆ ಆನೆ ಬಲ ಬಂದಂತಾಗುತ್ತದೆ.ಆದ್ದರಿಂದ ರಾಷ್ಟ್ರೀಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆಯುವ ಮೂಲಕ ಅನ್ವರ ಪಾಶಾ ಮನವಿ ಮಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…