ಬಿಸಿ ಬಿಸಿ ಸುದ್ದಿ

ಲಿಂಗಸ್ಗೂರು ಪಟ್ಟಣಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಸಲು ಡಿವೈಎಫ್ಐ ಆಗ್ರಹ

ಲಿಂಗಸಗೂರು: ಪಟ್ಟಣದ 7ನೇ ವಾರ್ಡ್ ಸೇರಿದಂತೆ ಹಲವು ವಾರ್ಡ್ ಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಸಲು ಒತ್ತಾಯಿಸಿ ಡಿವೈಎಫ್ಐ ಮುಖಂಡರು ಪುರಸಭೆಯ ಮುಖ್ಯಾಧಿಕಾರಿಗೆ ಬರೆದ ಮನವಿ ಪತ್ರವನ್ನು ಕಚೇರಿಯ ಮ್ಯಾನೇಜರ್ ಅವರಿಗೆ ಬುಧವಾರ ಸಲ್ಲಿಸಿದರು.

ಪಟ್ಟಣದ ಸಾಹಿತ್ಯ ಭವನದ ಹಿಂದುಗಡೆ ಇರುವ ಮನೆಗಳಿಗೆ ಬಹಳ ದಿನಗಳಿಂದ ನೀರಿನ ಸಮಸ್ಯೆ ಇದ್ದು, ಈ ಬಗ್ಗೆ ಮೌಖಿಕವಾಗಿ ಮತ್ತು ಲಿಖಿತವಾಗಿ ಪುರಸಭೆ ಆಡಳಿತಕ್ಕೆ ಗಮನಕ್ಕೆ ತಂದರೂ ಇಲ್ಲಿಯವರೆಗೆ ಯಾವುದೇ ರೀತಿಯಲ್ಲಿ ಕ್ರಮ ಕೈಗೊಂಡಿರುವುದಿಲ್ಲ. ಹಾಗೂ ಸ್ಥಳೀಯ ಶಾಸಕರೂ ಸಹ ನೀರಿನ ಸಮಸ್ಯೆ ತಿಳಿದಿದ್ದರೂ ತುಟಿ ಬಿಚ್ಚುತ್ತಿಲ್ಲ. ಇದು ಜನಪ್ರತಿನಿಧಿಗಳ ಜನವಿರೋಧಿ ನೀತಿಯಾಗಿದೆ. ಇದನ್ನು ಡಿವೈಎಫ್ಐ ಲಿಂಗಸ್ಗೂರು ನಗರ ಘಟಕ ತೀವ್ರವಾಗಿ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ತಾಲೂಕು ಸಮಿತಿಯಿಂದ ಪುರಸಭೆ ಮುಂದೆ ಅನಿರ್ಧಿಷ್ಟಾವಧಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರಾದ ವಿಶ್ವ ಅಂಗಡಿ, ಆಕಾಶ್, ಬಾಬಾ ಜಾನಿ ,ಮಹಮ್ಮದ್ ಸೇರಿದಂತೆ ವಾರ್ಡಿನ ನಿವಾಸಿಗಳು ಉಪಸ್ಥಿತರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

18 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago