ಆಳಂದ: ಗ್ರಾಮೀಣ ಭಾಗದಲ್ಲಿರುವ ಅನೇಕ ಸಮಸ್ಯಗಳಿಗೆ ಬೆಳಕು ಚಲ್ಲುವ ಜತೆಗೆ ಪ್ರತಿಭಾವಂತರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸುವ ಭಗತ್ ಸಿಂಗ್ ಯುವಕ ಸಂಘದ ಸಮಾಜಮುಖಿ ಕಾರ್ಯ ಇನ್ನೊಬ್ಬರಿಗೆ ಮಾದರಿಯಾಗಿದೆ ಎಂದು ಬಂಗರಗಾ ಚರಂತೇಶ್ವರ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರಿಜ್ವಾನ ಶೇಖ್ ಅಭಿಮತಪಟ್ಟರು.
ತಾಲೂಕಿನ ಬಬಲೇಶ್ವರ ಗ್ರಾಮದ ಭಗತ ಸಿಂಗ್ ಯುವಕ ಸಂಘದ ವತಿಯಿಂದ ಪ್ರಾಥಮಿಕ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮೆಡಲ್, ಕಪ್‌ಗಳು ನೀಡಿ ಗೌರವಿಸುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಇಲ್ಲಿನ ಸಂಘದವರು ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಕಾರ್ಯ ಮಾಡುತ್ತಿರುವದರಿಂದ ಗ್ರಾಮದಲ್ಲಿ ಪ್ರತಿಭೆಗಳು ಅರಳಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದರು.
ಸಂಘದ ಉಪಾಧ್ಯಕ್ಷ ಗೌತಮ ಕಾಂಬಳೆ ಅಧ್ಯಕ್ಷತೆವಹಿಸಿ ಮಾತನಾಡಿ, ಗ್ರಾಮದ ಸಮಸ್ಯಗಳಿಗೆ ಪರಿಹರಿಸುವ ಜತೆಗೆ ಶಿಕ್ಷಣ, ಆರೋಗ್ಯ, ಸ್ವಚ್ಛತೆ ಕಡೆಗೆ ಸಂಘ ಹೆಚ್ಚಿನ ಗಮನ ನೀಡುತ್ತಿದೆ ಎಂದರು. ಶಾಲೆಯ ಮುಖ್ಯ ಶಿಕ್ಷಕ ದತ್ತಪ್ಪ ಪೂಜಾರಿ ಸಭೆಯಲ್ಲಿ ಮಾತನಾಡಿದರು. ಸಂಘದ ಕಾರ್ಯದರ್ಶಿ ಗುಂಡಪ್ಪ ಪೂಜಾರಿ, ಸಹ ಕಾರ್ಯದರ್ಶಿ ಅಜೀಜ ಮಕನದಾರ, ಸದಸ್ಯ ರಿಯಾಜ ಶೇಖ್, ಸಂತೋಷ ಸೂರವಸೆ, ಸಜ್ಜಾದ ಶೇಖ್, ಫಯಾಜ ಶೇಖ್, ಸುರಜ ಕಾಂಬಳೆ, ಸಾಗರ ಖಡಾಗಾಳೆ, ಸಾಯಿಲ್ ಮುಜಾವರ, ಮೌಲಾ ಮುಜಾವರ ಸೇರಿದಂತೆ ಇತರರು ಭಾಗವಹಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷ ಕೇದಾರನಾಥ ಕರಬಸಪ್ಪ ಪಾಟೀಲ್, ಉಪಾಧ್ಯಕ್ಷ ನಾಗಯ್ಯ ಸ್ವಾಮಿ ಇವರನ್ನು ಸಂಘದಿಂದ ಗೌರವಿಸಲಾಯಿತು. ಸಂಘದ ಸದಸ್ಯರು, ಪಾಲಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…