ಬಿಸಿ ಬಿಸಿ ಸುದ್ದಿ

ಟ್ಯಾಂಕರ್ ಮೂಲಕ , ಕುಡಿಯುವ ನೀರು ಸರಬರಾಜು ಮಾಡದಿದ್ದರೆ ಉಗ್ರ ಹೋರಾಟ

ಕಲಬುರಗಿ: ಮುಂಗಾರು ಮಳೆಗೆ ಹಿನ್ನಡೆ ಯಾಗಿರುವುದರಿಂದ ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.ಇದರಿಂದ ಜನತೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.ಆದರೆ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಕುಡಿಯುವ ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಆಗ್ರಹಿಸಿದ್ದಾರೆ.

ಜೂನ್ ತಿಂಗಳಲ್ಲಿ ಬರಬೇಕಾಗಿದ್ದ ಮಳೆ ಸಧ್ಯದ ಮಟ್ಟಿಗೆ ಸಂಪೂರ್ಣ ಕೈ ಕೊಟ್ಟಿದೆ.ಈ ವರ್ಷ ಬಿಸಿಲಿನ ಪ್ರಖರತೆ ಹೆಚ್ಚಾಗಿದ್ದರಿಂದ ಬಾವಿಗಳು ಹಾಗೂ ಕೊಳವೆ ಬಾವಿಗಳು ಬತ್ತಿ ಹೋಗಿವೆ.ಕಲಬುರಗಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಾನುವಾರಗಳಿಗೆ ಕುಡಿಯಲು ನೀರು ಸಿಗುತ್ತಿಲ್ಲ.ಇದರಿಂದ ಪರಿಸ್ಥಿತಿ ಗಂಭೀರವಾಗಿದ್ದು ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಕಲಬುರಗಿ ನಗರದಲ್ಲಿ ಮೇ ತಿಂಗಳ ಮೊದಲ ವಾರದಲ್ಲೇ ಹಲವು ಬಡಾವಣೆಗಳಲ್ಲಿ ಕೊಳವೆ ಬಾವಿಗಳು ಬತ್ತಿ ಹೋಗಿವೆ.ಜನರು ದಿನ ನಿತ್ಯ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಟ್ಯಾಂಕರ್ ವ್ಯವಸ್ಥೆ ಮಾಡಿಲ್ಲ.ಜಿಲ್ಲಾಧಿಕಾರಿಗಳು ಜನರಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಸೂಚಿಸಿದ್ದರೂ ಅವರ ಮಾತಿಗೆ ಅಧಿಕಾರಿಗಳು ಕವಡೆ ಕಿಮ್ಮತ್ತು ನೀಡುತ್ತಿಲ್ಲ.

ಜನರು ಕುಡಿಯುವ ನೀರಿಗಾಗಿ ಒತ್ತಾಯಿಸುತ್ತಿದ್ದಾರೆ.ಆದರೆ ಕ್ಯಾರೇ ಅನ್ನುತ್ತಿಲ್ಲ.ನಗರದ ಜಯನಗರ,ತಿಲಕ ನಗರ, ಆದರ್ಶ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ.ಇನ್ನು ನಲ್ಲಿಗಳಲ್ಲಿ ವಾರಗಟ್ಟಲೆ ನೀರು ಸರಬರಾಜು ಆಗುತ್ತಿಲ್ಲ.ಇದರಿಂದ ಮತ್ತಷ್ಟು ತೊಂದರೆ ಹೆಚ್ಚಾಗಿದೆ.ಕೂಡಲೇ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು.ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago