3ರಿಂದ ಕಸಾಪದಿಂದ ಸಂಸ್ಕøತಿ ಸೌರಭ’ ಕಾರ್ಯಕ್ರಮ

0
88

ಕಲಬುರಗಿ: ಸಾಹಿತ್ಯ, ಸಂಸ್ಕøತಿಯ ಸದಭಿರುಚಿಯನ್ನು ಇಂದಿನ ಸಮಾಜಕ್ಕೆ ಪರಿಚಯಿಸುವುದರೊಂದಿಗೆ, ಯುವಕರಲ್ಲಿ ಆತ್ಮವಿಶ್ವಾಸ ವೃದ್ಧಿಯ ಜತೆಗೆ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜುಲೈ 3 ರಂದು ಸಾಯಂಕಾಲ 4.15 ಕ್ಕೆ ನಗರದ ಕನ್ನಡ ಭವನದಲ್ಲಿ ಭಾಷೆ-ಸಂಸ್ಕøತಿ-ಕಲೆಯ ಸಂಭ್ರಮದ `ಸಂಸ್ಕøತಿ ಸೌರಭ’ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಇಂದಿನ ಹೊಸ ಪೀಳಿಗೆಯಲ್ಲಿ ಭಾರತೀಯ ಸಂಸ್ಕøತಿ ಮತ್ತು ಕಲೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಈ ಕಾರ್ಯಕ್ರಮ ಹೊಂದಿದೆ. ಪ್ರತಿಯೊಬ್ಬರೂ ಸಂಸ್ಕøತಿಯ ಪರಂಪರೆ ಕುರಿತು ಅರಿವು ಬೆಳೆಸಿಕೊಂಡರೆ ಇದರಿಂದಾಗಿ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕøತಿಯನ್ನು ಪರಿಚಯಿಸಲು ಸಾಧ್ಯವಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

Contact Your\'s Advertisement; 9902492681

ಶ್ರೀನಿವಾಸ ಸರಡಗಿಯ ಶ್ರೀ ಅಪ್ಪಾರಾವ ದೇವಿ ಮುತ್ಯಾ ಅವರ ದಿವ್ಯ ಸಾನಿಧ್ಯದಲ್ಲಿ ಜರುಗಲಿರುವ ಸಮಾರಂಭವನ್ನು ಸಿಐಡಿ ವಿಭಾಗದ ಡಿವೈಎಸ್ಪಿ ಶಂಕರಗೌಡ ಪಾಟೀಲ ಉದ್ಘಾಟಿಸಲಿದ್ದಾರೆ. ವೈದ್ಯ ಚಿಂತಕಿ ಡಾ. ಭಾಗ್ಯಶ್ರೀ ಶರಣಪ್ರಕಾಶ ಪಾಟೀಲ, ಹಿರಿಯ ಪತ್ರಕರ್ತ ದೇವಯ್ಯಾ ಗುತ್ತೇದಾರ, ಪ್ರಾಧ್ಯಾಪಕ ಡಾ. ಬಾಬುರಾವ ಶೇರಿಕಾರ, ಬಸವಪ್ರಭು ಮುಡುಬಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ನೇತೃತ್ವ ವಹಿಸಲಿದ್ದಾರೆ. ಕಲೆಗಳ ಉಳಿವಿಗಾಗಿ ಶ್ರಮಿಸುತ್ತಿರುವ ವಿವಿಧ ಕ್ಷೇತ್ರದ ಪ್ರಮುಖರನ್ನು ಗೌರವಿಸಲಾಗುವುದು.

ಇತ್ತೀಚೆಗೆ ನಡೆದ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ 90 ಕ್ಕೂ ಹೆಚ್ಚು ಪ್ರತಿಶತ ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳನ್ನು ಸತ್ಕರಿಸಲಾಗುತ್ತಿದ್ದು, ಆಸಕ್ತರು ಮೊ. 98803 49025 ಅಥವಾ 98865 60869 ಗೆ ಸಂಪರ್ಕಿಸಿ ಹೆಸರು ನೋಂದಾಯಿಸಲು ಕೋರಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here