5 ವರ್ಷದ ಅವಧಿಯೊಳಗಿನವರಿಗೆ ಯುವ ನಿಧಿ ಯೋಜನೆ ಜಾರಿಯಾಗಲಿ

0
72

ಕಲಬುರಗಿ: ರಾಜ್ಯ ಸರಕಾರವು ರಾಜ್ಯದ ನಿರುದ್ಯೋಗಿ ಯುವಕರಿಗೆ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಶಿಕ್ಷಣ ಪೂರ್ಣಗೊಳಿಸಿದವರನ್ನು ಮಾತ್ರ ಪರಿಗಣಿಸಿಲು ಮುಂದಾಗಿರುವ ಕ್ರಮವು ನ್ಯಾಯಸಮ್ಮತವಲ್ಲ. ಕಳೆದ ಮೂರು-ನಾಲ್ಕು ವರ್ಷಗಳ ಹಿಂದೆ ಕೋವಿಡ್ ಪರಿಣಾಮದಿಂದ ಶಿಕ್ಷಣ ಹಾಗೂ ಉದ್ಯೋಗದಲ್ಲಿ ತೊಂದರೆಗೊಳಗಾದವರು ಯೋಜನೆ ಲಾಭ ಸಿಗಬೇಕೆಂದು ಅಖಿಲ ಭಾರತ ಯುವಜನ ಫೆಡರೇಚನ್ ಸರಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ಸರಕಾರ ಪ್ರಸ್ತುತ ಜಾರಿಗೆ ತರಲು ಉದ್ದೇಶಿಸಿರುವ ಯುವನಿಧಿ ಯೋಜನೆಯ ನಿಜವಾದ ಫಲಾನುಭವಿಗಳು ಅವರಾಗಬೇಕಿತ್ತು. ಆದರೆ ಇಂದು ಅವರನ್ನು ಕಡೆಗಣಿಸಿರುವುದು ಸರಿಯಲ್ಲ. ಸರಕಾರ ಕೇವಲ ಪ್ರಚಾರ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರದೇ, ವೈಜ್ಞಾನಿಕ ಕ್ರಮವನ್ನು ಅನುಸರಿಸಿ ಕನಿಷ್ಟ ೫ ವರ್ಷಗಳ ಹಿಂದಿನ ಅವಧಿಯಲ್ಲಿ ಶಿಕ್ಷಣ ಪೂರ್ಣಗೊಳಿಸಿದವರಿಗೂ ಈ ಯೋಜನೆಯನ್ನು ವಿಸ್ತರಿಸಬೇಕೆಂದು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ರಾಜ್ಯದ ವಿವಿಧ ಸರಕಾರಿ ಇಲಾಖೆಗಳಲ್ಲಿನ ಖಾಲಿ ಇರುವ ಹುದ್ದೆಗಳಿಗೆ ಕೂಡಲೇ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಬೇಕು ಹಾಗೆ ನೇಮಖಾತಿಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿಸಲ್ಲಿಸಲು ವಿಧಿಸುವ ಶುಲ್ಕದ ಹೊರೆಯನ್ನು ಕಡಿಮೆ ಮಾಡಬೇಕು. ರಾಜ್ಯದ ಯುವಜನರ ಸಮಗ್ರ ಅಭಿವೃದ್ದಿಯ ದೃಷ್ಟಿಯಿಂದ ರಾಜ್ಯ ಯುವನೀತಿಯನ್ನು ಪರಿಷ್ಕಕರಿಸಿ ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಹಿಂದಿನ ಸರಕಾರ ತರಾತುರಿಯಲ್ಲಿ ಜಾರಿಗೆ ತಂದ ಅವೈಜ್ಞಾನಿಕ ನೂತನ ರಾಷ್ಟಿçÃಯ ಶಿಕ್ಷಣ ನೀತಿ-೨೦೨೦ ಅನ್ನು ತಮ್ಮ ಚುನಾವಣಾ ಪ್ರಣಾಳಿಕೆಲ್ಲಿ ಘೋಷಿಸಿರುವಂತೆ ರದ್ದುಪಡಿಸುವ ಮೂಲಕ ರಾಜ್ಯದ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಮುಂದಾಗಬೇಕೆಂದು ಅಖಿಲ ಭಾರತ ಯುವಜನ ಫೆಡರೇಷನ್ (ಎಐವೈಎಫ್) ಕಲಬುರಗಿ ಜಿಲ್ಲಾಸಮಿತಿ ವತಿಯಿಂದ ಜಿಲ್ಲಾಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ನಿಯೋಗದಲ್ಲಿ ಭೀಮಶಂಕರ ಮಾಡ್ಯಾಳ, ಅಸ್ಲಾಂ ಶೇಕ, ಬಸವರಾಜ ಟೆಂಗಳಿ, ರಾಜು ಹೆಬ್ಬಾಳ, ರಘುನಂದನ ಕುಲಕರ್ಣಿ, ಇಮಾಮ ಸಾಬ ಸುಂಟಾಣ, ಕಲ್ಯಾಣರಾವ ಮುರುಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here