ಕಲಬುರಗಿ: ಶುಕ್ರವಾರ ಶಿರವಳವಾಡಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರಿಗೆ ಕರ್ನಾಟಕ ಸರ್ಕಾರ ಪರಿಹಾರ ನೀಡಬೇಕು ಎಂದು ಆಳಂದ ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರೆಲ್ಲರೂ ಆರ್ಥಿಕವಾಗಿ ಬಹಳ ಹಿಂದುಳಿದವರಾಗಿದ್ದಾರೆ. ಇವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದು ದಿನನಿತ್ಯದ ಉಪಜೀವನಕ್ಕಾಗಿ ಕೂಲಿಯನ್ನೇ ನಂಬಿಕೊಂಡವರಾಗಿದ್ದರು ಹೀಗಾಗಿ ಸರ್ಕಾರ ಮೃತರಿಗೆ ತಲಾ 5 ಲಕ್ಷ, ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯತ್ತಿರುವವರಿಗೆ 2 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷದಂತೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಅಣೂರ ಗ್ರಾಮವು ಗಡಿಗ್ರಾಮವಾಗಿದ್ದು ಗ್ರಾಮದ ಬಹಳಷ್ಟು ಜನ ಕೂಲಿಯನ್ನೇ ನಂಬಿಕೊಂಡು ಜೀವನ ನಡೆಸುವವರಾಗಿದ್ದಾರೆ. ಆದರೆ ಅಪಘಾತದ ಪರಿಣಾಮ ಆ ಕುಟುಂಬಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿವೆ ಆದ್ದರಿಂದ ಕೂಡಲೇ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆಯವರು ಪರಿಹಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…