ಕಲಬುರಗಿ: ಎಸ್.ಡಿ.ಎಂ.ಸಿ ಅಧ್ಯಕ್ಷ ಹಾಗೂ ಸದಸ್ಯರಿಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿರುವುದನ್ನು ಪ್ರಶ್ನಿಸಿರುವುದಕ್ಕೆ ಸರ್ಕಾರ ಯಾರದೇ ಇರಲಿ ಚಿಂಚೋಳಿಗೆ ನಾನೆ ಸಿಎಂ ಎಂದು ಚಿಂಚೋಳಿ ಕ್ಷೇತ್ರದ ಶಾಸಕ ಡಾ. ಅವಿನಾಶ ಜಾಧವ್ ಅವರು ಅಧಿಕಾರಿಗಳ ಎದುರು ಅವಾಜ್ ಹಾಕಿರುವ ಘಟನೆ ಶನಿವಾರ ನಡೆದಿದೆ.
ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ನಡೆದ ವನ ಮಹೋತ್ಸವ ಕಾರ್ಯಕ್ರಮಕ್ಕೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಆದರ್ಶ ವಿದ್ಯಾಲಯದ ಪ್ರಿನ್ಸಿಪಲ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘನೆ ಕುರಿತು ಎಸ್ ಡಿಎಂಸಿ ಅಧ್ಯಕ್ಷ ಹಾಗೂ ಸದಸ್ಯರು ಪ್ರಶ್ನಿಸಿದ್ದಕ್ಕೆ ಗಲಾಟೆ ಸಂಭವಿಸಿದ ಪರಿಣಾಮ ಕೆಲಕಾಲ ಗೊಂದಲದ ವಾತವರಣ ನಿರ್ಮಾಣವಾಗಿತ್ತು.
ಈ ವೇಳೆ ಎಸ್ ಡಿಎಂಸಿ ಸದಸ್ಯರ ಹಾಗೂ ಶಾಸಕರ ನಡೆವೆ ನಡೆದ ಮಾತಿನ ಚಕಮಕಿ ಜೋರಾಗಿ ನಡೆದಿತ್ತು. ವನ ಮಹೋತ್ಸವ ಕಾರ್ಯಕ್ರಮದಲ್ಲಿ ಗಲಾಟೆ ವನಮಹೋತ್ಸವ ಕಾರ್ಯಕ್ರಮವಾಗಿ ಮಾರ್ಪಟಿತ್ತು. ನಂತರ ಅರಣ್ಯ ಅಧಿಕಾರಿಗಳು ಕಾರ್ಯಕ್ರಮ ಮೊಟಕುಗೊಳ್ಳಿಸಿದರು ಎನ್ನಲಾಗಿದ್ದು, ಶಿಷ್ಟಾಚಾರ ಉಲ್ಲಂಘಿಸಿದ ವಿದ್ಯಾಲಯದ ಪ್ರಿನ್ಸಿಪಲ್, ಅರಣ್ಯ ಇಲಾಖೆಯ ಅಧಿಕಾರಿಗಳ ಹಾಗೂ ಅವಾಜ್ ಹಾಕಿದ ಶಾಸಕ ಅವಿನಾಶ್ ಜಾಧವ್ ಅವರ ನಡೆಗೆ ಎಸ್.ಡಿ.ಎಂ.ಸಿ ಅಧ್ಯಕ್ಷ ಲಕ್ಷ್ಮಣ ಅಂವಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…